ಶಿಕ್ಷಣದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣ
ಕ.ಪ್ರ. ವಾರ್ತೆ ಕೆ.ಆರ್. ನಗರ ಸೆ.8
ಶಿಕ್ಷಣದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣವಾದಾಗ ಮಾತ್ರ ಶಿಕ್ಷಣಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ, ಶಿಕ್ಷಕರ ದಿನಾಚರಣೆ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾನ್ವೇಷಣಾ ಸ್ಪರ್ಧೆಗಳನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಎಂದರೆ ನಾಲ್ಕು ಗೋಡೆಗಳ ನಡುವೆ ಕಲಿಯುವಂತದ್ದಲ್ಲ. ಅದು ವಿದ್ಯಾರ್ಥಿಯ ಸರ್ವಾಂಗೀಣ ಏಳಿಗೆಗೆ ಸಹಕಾರಿಯಾಗಿರಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ. ಕ್ರೀಡಾ ಮನೋಭಾವನೆಯಿಂದ ಸವಾಲು ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.
ಹಲವು ವರ್ಷಗಳ ಹಿಂದೆ ಪಟ್ಟಣದಲ್ಲಿ ಒಂದು ಸಂಯುಕ್ತ ಪದವಿ ಕಾಲೇಜು ಇತ್ತು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿ ಲಭ್ಯವಿರಲಿಲ್ಲ. ಹೀಗಾಗಿ ಕಾಲೇಜಿಗೆ ವಿಜ್ಞಾನ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗಗಳ ಕಟ್ಟಡಕ್ಕೆ ಅನುದಾನ ಮಂಜೂರು ಮಾಡಿಸುವುದರ ಜೊತೆಗೆ ಮೂಲಸೌಲಭ್ಯ ಒದಗಿಸಲಾಗಿದೆ ಎಂದರು.
ತಾಲೂಕಿನ ವಿದ್ಯಾರ್ಥಿಗಳ ಬವಣೆ ತಪ್ಪಿಸಲು ಎಂಎ, ಎಂಎಸ್ಡಬ್ಲ್ಯೂ, ಪತ್ರಿಕೋದ್ಯಮ, ಅಪರಾಧಶಾಸ್ತ್ರದಂತಹ ಉತ್ತಮ ಕೋರ್ಸುಗಳನ್ನು ಆರಂಭಿಸಲಾಗಿದ್ದು, ಈಗಾಗಲೇ 2 ಕೋಟಿ ವೆಚ್ಚದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಮುಂದಿನ ದಿನಗಲ್ಲಿ ಕಾಲೇಜಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ಜಿಪಂ ಹಂಗಾಮಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಪಾಂಡುರಂಗೇಗೌಡ, ಸದಸ್ಯ ಹೊಸೂರು ಬಿ.ರಮೇಶ್, ನಿವೃತ್ತ ಪ್ರಾಂಶುಪಾಲೆ ಕೆ. ಭಾರತಿ, ಪ್ರಾಂಶುಪಾಲ ಕೆ.ಅರ್. ದೀಕ್ಷಿತ್, ಪುರಸಭಾ ಸದಸ್ಯರಾದ ಗೀತಾ ಮಹೇಶ್, ಪುಷ್ಪಾ ಶಿವಪ್ರಸಾದ್, ಕೆ.ವಿ. ಪ್ರಕಾಶ್, ಉಮೇಶ್, ಉಪಾನ್ಯಾಸಕ ಡಾ.ಎಚ್.ಎನ್. ಮಂಜುನಾಥ್, ಸುನಿಲ್, ಮೋಹನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

