ಮೈಸೂರು

10ಕ್ಕೆ ಎಸ್ಎಫ್ಐ ದೆಹಲಿ ಚಲೋ

Published On :

ಮೈಸೂರು: ದೇಶದ ಶಿಕ್ಷಣ ರಂಗವನ್ನು ಖಾಸಗಿ ಹಾಗೂ ವಿದೇಶಿ ಬಂಡವಾಳಗಾರರಿಗೆ ಮುಕ್ತಗೊಳಿಸಿರುವ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸೆ.10 ರಂದು ದೆಹಲಿ ಚಲೋ ಹಮ್ಮಿಕೊಂಡಿದೆ. ಪ್ರಸ್ತುತ ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯುವ ಪ್ರಮಾಣ ಕೇವಲ ಶೇ.12 ಮಾತ್ರ. 17 ರಿಂದ 23 ವಯಸ್ಸಿನ 100 ಮಂದಿ ಯುವಜನರಲ್ಲಿ ಶೇ.90 ಮಂದಿ ಕಾಲೇಜು ಹಾಗೂ ವಿವಿಗಳಿಂದ ಹೊರಗಿದ್ದಾರೆ. ಮುಂದುವರಿದ ರಾಷ್ಟ್ರಗಳಲ್ಲಿ ಉನ್ನತ ಶಿಕ್ಷಣದಲ್ಲಿ ಶೇ.45 ರಿಂದ 85 ಪ್ರಗತಿ ಸಾಧಿಸಲಾಗಿದೆ. ಹೀಗಿರುವಾಗ ಖಾಸಗಿ ಹಾಗೂ ವಿದೇಶಿ ಬಂಡವಾಳಗಾರರಿಗೆ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದರೆ ಶುಲ್ಕ ದುಬಾರಿ ವೆಚ್ಚವಾಗಲಿದೆ. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿ ಉನ್ನತ ಶಿಕ್ಷಣ ಸಾಧನೆಗೆ ಹಿನ್ನಡೆಯಾಗಲಿದೆ ಎಂದು ಒಕ್ಕೂಟದ ರಾಜ್ಯ ಕಾರ್ಯದರ್ಶಿ ಹುಳ್ಳಿ ಉಮೇಶ್ ಹಾಗೂ ಜಿಲ್ಲಾ ಕಾರ್ಯದರ್ಶಿ ಮಹೇಶ್ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.