ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿ ಸಾವು: ಸಂಬಂಧಿಕರ ಪ್ರತಿಭಟನೆ
ಕ.ಪ್ರ. ವಾರ್ತೆ ಎಚ್.ಡಿ. ಕೋಟೆ ಸೆ.10
ತಾಲೂಕಿನ ಸರಗೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಎದುರಿರುವ ನಿಮಿಷಾಂಬ ಕ್ಲಿನಿಕ್ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಿಡುಗಲು ಗ್ರಾಮದ ಮಹದೇವಪ್ಪ (54) ಎಂಬವರು ಸೋಮವಾರ ಮೃತಪಟ್ಟಿದ್ದಾರೆ.
ಮಹದೇವಪ್ಪ ಭಾನುವಾರ ದಿನ ತಲೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದು ಸರಗೂರಿನ ನಿಮಿಷಾಂಬ ಕ್ಲಿನಿಕ್ನ ವೈದ್ಯರಾದ ಸುಬ್ರಮಣ್ಯ ಅವರ ಬಳಿ ಬಂದು ತೋರಿಸಿದ್ದರು. ವೈದ್ಯರು ಅವರಿಗೆ ಚುಚ್ಚುಮದ್ದು ನೀಡಿ ಮನೆಗೆ ಕಳುಹಿಸಿದರು. ಮನೆಗೆ ತೆರಳಿದ ಕೆಲವೆ ಹೊತ್ತಿನಲ್ಲಿ ಮಹದೇವಪ್ಪಗೆ ವಾಂತಿ ಕಾಣಿಸಿಕೊಂಡಿತು. ಮನೆಯವರು ಪುನಃ ಸರಗೂರು ಸಾರ್ವಜನಿಕ ಆಸ್ಪತ್ರೆಯ ವೈದ್ಯರಿಗೆ ಮನವಿ ಮಾಡಿ ಮನೆಗೇ ಬರುವಂತೆ ಕೋರಿದ್ದಾರೆ.
ಆದರೆ, ಆಸ್ಪತ್ರೆಯಲ್ಲಿ ಹೊರ ರೋಗಿಗಳು ಜಾಸ್ತಿ ಇರುವುದರಿಂದ ಬರುವುದಿಲ್ಲ ಎಂದು ವೈದ್ಯರು ನಿರಾಕರಿಸಿದ್ದಾರೆ. ಪುನಃ ಕುಟುಂಬಸ್ಥರು ಸರಗೂರು ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಗೆ ಮಹದೇವಪ್ಪ ಅವರನ್ನು ಕರೆತಂದಿದಾಗೆ ತಪಾಸಣೆ ನಡೆಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಇದರಿಂದ ಕುಪಿತಗೊಂಡ ಕುಟುಂಬಸ್ಥರು ಮಹದೇವಪ್ಪ ಅವರ ಶವವನ್ನು ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗವಿಟ್ಟು ಪ್ರತಿಭಟನೆ ನಡೆಸಿದರು.
ವಿಷಯ ತಿಳಿಯುತ್ತಿದ್ದಂತೆ ಗ್ರಾಮದವರು ಕ್ಲಿನಿಕ್ಗೆ ಬಂದು ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವೈದ್ಯರು ಮಹದೇವಪ್ಪ ಅವರ ಸಾವಿಗೂ ತಮಗೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಸಮಾಜಾಯಿಷಿ ನೀಡುವಾಗ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ನಂತರ ಪೊಲೀಸ್ ಠಾಣೆಯಲ್ಲಿ ವೈದ್ಯ ಸುಬ್ರಮಣ್ಯ ಅವರು ಮಹದೇವಪ್ಪ ಕುಟುಂಬ ವರ್ಗದವರಿಗೆ 6 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

