ಅನಧಿಕೃತ ಗ್ರಾನೈಟ್ ನಿಯಂತ್ರಿಸಿ
ಕ.ಪ್ರ.ವಾರ್ತೆ ಮೈಸೂರು ಸೆ. 11
ಕಂದಾಯ ಭೂಮಿಯಲ್ಲಿ ಅನಧಿಕೃತ ಗ್ರ್ಯಾನೈಟ್ ಹಾಗೂ ಡೈಯಿಂಗ್ ಉದ್ಯಮ ಆರಂಭಿಸುತ್ತಿರುವವರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಜಿಲ್ಲಾ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ಕುಮಾರ್ ಜೈನ್ ಒತ್ತಾಯಿಸಿದ್ದಾರೆ.
2009ರ ಒಳಗೆ ನಿರ್ಮಾಣವಾದ ಅನಧಿಕೃತ ಮನೆಗಳನ್ನು ಸಕ್ರಮಗೊಳಿಸಲು ಸರ್ಕಾರ ಮುಂದಾಗುತ್ತಿದ್ದಂತೆಯೇ ಮಧುರೈನಿಂದ ವಲಸೆ ಬಂದಿರುವ ಎರಡು ಉದ್ಯಮಗಳು ನಂಜನಗೂಡು ತಾಲೂಕು ಹಿಮ್ಮಾವಿನಲ್ಲಿ ರಾಜಾರೋಷವಾಗಿ ಈ ಉದ್ಯಮ ಆರಂಭಿಸಿವೆ. ಮನೆಗಳಂತೆಯೇ ಚಿಕ್ಕದಾದ ಸ್ಥಳದಲ್ಲಿ ಕಚೇರಿ ತೆರೆದು ಬಯಲಿನಲ್ಲಿ ಗ್ರಾನೈಟ್ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮೈಸೂರು ಉಪ ವಿಭಾಗಾಧಿಕಾರಿ ಇಂತಹ ಡ್ರೈಯಿಂಗ್ ಉದ್ಯಮ ಮುಚ್ಚಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಈಗ ನಂಜನಗೂಡು ತಹಸೀಲ್ದಾರ್, ಕೆಐಎಡಿಬಿ ಅಧಿಕಾರಿಗಳು, ಎಂಡಿಎ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಆದ್ದರಿಂದ ಕೂಡಲೆ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

