ಪ್ರೇಮಿಗಳಿಗೆ ಶಾಸಕರ ಬೆಂಬಲದ ಭಯ: ದೂರು
ಕ.ಪ್ರ.ವಾರ್ತೆ ಮೈಸೂರು ಸೆ. 11
ಪ್ರೀತಿಸಿ ಮದುವೆಯಾಗಿ ವರ್ಷವಾಗುತ್ತಿದ್ದರೂ ಪ್ರೇಮಿಗಳಿಗೆ ಶಾಸಕರೊಬ್ಬರ ಭಯ ಕಾಡುತ್ತಿದ್ದು, ಈ ಸಂಬಂಧ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಪ್ರೇಮಿಗಳು ಬುಧವಾರ ರಾತ್ರಿ ದೂರು ನೀಡಿದ್ದಾರೆ.
ರಾಮನಗರ ಮೂಲದ ನಿವಾಸಿ ನಾಗೇಶ್ ರೆಡ್ಡಿ (32) ಮತ್ತು ಬೆಂಗಳೂರಿನ ಪ್ರಕಾಶ್ ರೆಡ್ಡಿ ಎಂಬವರ ಪುತ್ರಿ ರಕ್ಷಿತಾ (19) ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. 2012ರ ಅ.5 ರಂದು ಈ ಇಬ್ಬರು ಮನೆ ಬಿಟ್ಟು ಹೋಗಿ ಅ.18 ರಂದು ಶಿರಡಿಯಲ್ಲಿ ಮದುವೆಯಾಗಿದ್ದಾರೆ. ನಾಗೇಶ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು.
ಶಾಸಕರೊಬ್ಬರ ಸಂಬಂಧಿಯಾದ ಪ್ರಕಾಶ್ ರೆಡ್ಡಿ, ಅವರ ಬೆಂಬಲದೊಂದಿಗೆ ತಮಗೆ ಬೆದರಿಕೆ ಹಾಕುತ್ತಿದ್ದಾರೆ. ಹೀಗಾಗಿ ಕಳೆದ ಕೆಲವು ದಿನಗಳಿಂದ ಮೈಸೂರಿನಲ್ಲಿ ಉಳಿದಿದ್ದೆವು. ಆದರೆ, ಮೈಸೂರಿನಲ್ಲಿರುವುದು ಗೊತ್ತಾಗಿ ಹುಡುಕಾಟ ಆರಂಭಿಸಿದ್ದಾರೆ. ಹೀಗಾಗಿ 3 ದಿನ ಹಿಂದೆ ಮೈಸೂರು ಖಾಲಿ ಮಾಡಿ ಬೇರೆ ಕಡೆ ಹೋಗಿದ್ದೇವೆ.
ತಮಗೆ ರಕ್ಷಣೆ ನೀಡುವಂತೆ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಪೊಲೀಸರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಮೈಸೂರು ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಅವರು ಮೈಸೂರಿನಲ್ಲಿ ಉಳಿದುಕೊಂಡರೆ ಸೂಕ್ತ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ನಾಗೇಶ್ ರೆಡ್ಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

