'ಸಂಪಾದನೆ ಹಾದಿ ಹಿಡಿದಿರುವ ವಿದ್ಯಾವಂತರು'
ಕ.ಪ್ರ.ವಾರ್ತೆ ಮೈಸೂರು ಸೆ. 11
ತಾಂತ್ರಿಕ ಶಿಕ್ಷಣ ಪಡೆದವರು ವರದಕ್ಷಿಣೆ ಮತ್ತು ಹಣ ಸಂಪಾದನೆ ಹಾದಿ ಹಿಡಿದಿರುವುದು ಸರಿಯಲ್ಲ ಎಂದು ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಎಲ್. ರೇವಣಸಿದ್ದಯ್ಯ ಹೇಳಿದರು.
ನಗರದ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಆಯೋಜಿಸಿದ್ದ ಡಾ.ಶ್ರೀ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 98ನೇ ಜಯಂತಿ ಮಹೋತ್ಸವದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಶಿಕ್ಷಣ ಪಡೆದವರು ವರದಕ್ಷಿಣೆ ಪಡೆಯುವುದು ಮತ್ತು ಹಣ ಸಂಪಾದನೆ ಹಾದಿ ಹಿಡಿಯುತ್ತಿರುವುದು ಸರಿಯಲ್ಲ. ಇದೆ ಹಾದಿಯನ್ನು ವೈದ್ಯಕೀಯ ವೃತ್ತಿಯಲ್ಲಿ ತೊಡಗಿರುವ ಕೆಲವರೂ ಅನುಸರಿಸುತ್ತಿದ್ದಾರೆ. ಆದ್ದರಿಂದ ತಾವು ಸಾಮಾಜಿಕ ಕಳಕಳಿ ಹೊಂದಿ ಸೇವೆ ಮಾಡಬೇಕು ಎಂದರು.
ಜೆಎಸ್ಎಸ್ ವಿದ್ಯಾಸಂಸ್ಥೆಗಳು ವಿಶ್ವವಿದ್ಯಾಲಯದಂತೆ ಕೆಲಸ ಮಾಡುತ್ತಿವೆ. ವಿದ್ಯಾರ್ಥಿಗಳಿಗೆ ಪೂರಕವಾಗಿ ಸ್ಪಂದಿಸುತ್ತಿದೆ. 350ಕ್ಕೂ ಹೆಚ್ಚು ಸಂಸ್ಥೆಯನ್ನು ಹೊಂದಿರುವ ಜೆಎಸ್ಎಸ್ ರಾಜ್ಯ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಿದೆ. ವಿದ್ಯಾರ್ಥಿಗಳು ಈ ಸೌಲಭ್ಯ ಸದುಪಯೋಗ ಮಾಡಿಕೊಂಡು ಸಾಧನೆಗಾಗಿ ಅಡ್ಡ ದಾರಿ ಹಿಡಿಯದೆ, ಪರಿಶ್ರಮದಿಂದ ಗುರಿ ಮಟ್ಟಬೇಕು ಎಂದರು.
ತುಮಕೂರಿನ ರಾಮಕೃಷ್ಣ- ವಿವೇಕಾನಂದ ಆಶ್ರಮದ ಅಧ್ಯಕ್ಷ ಡಾ.ವೀರೇಶಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಹೈಕ್ಯಾಲ್ ಟೆಕ್ನಾಲಜೀಸ್ನ ಅಧ್ಯಕ್ಷ ಎಂ.ಎಸ್. ಶಶಿಕಿರಣ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜೆಎಸ್ಎಸ್ ಮಹಾವಿದ್ಯಾಪೀಠದ ನಿರ್ದೇಶಕ ಪ್ರೊ.ಎಂ.ಎಚ್. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಜಿ. ಸಂಗಮೇಶ್ವರ, ಮಹಿಳಾ ಪಾಲಿಟೆಕ್ನಿಕ್ ಪ್ರಾಂಶುಪಾಲ ನಂಜುಂಡಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

