ಮೈಸೂರು

ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ಹೆಚ್ಚು ಹೊರೆ

Published On :

ಕ.ಪ್ರ.ವಾರ್ತೆ   ಮೈಸೂರು   ಸೆ. 11
ಕರ್ನಾಟಕ ಹಾಲು ಮಹಾಮಂಡಳಿ ಕಳೆದ ಆರು ತಿಂಗಳಲ್ಲಿ ಹಾಲಿನ ಬೆಲೆಯನ್ನು 6 ಹೆಚ್ಚಿಸಿ ಸಾರ್ವಜನಿಕರಿಗೆ ಹೊರೆಯಾಗುವಂತೆ ಮಾಡಿದೆ ಎಂದು ಮಾಜಿ ಮೇಯರ್ ಸಂದೇಶ್ ಸ್ವಾಮಿ ಆರೋಪಿಸಿದ್ದಾರೆ.
ನೂತನವಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಕೆಎಂಎಫ್ನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಹಾಗೂ ಹಾಲು ಒಕ್ಕೂಟಗಳಲ್ಲಿರುವ ಇತರೆ ಪಕ್ಷಗಳ ಪ್ರತಿನಿಧಿಗಳ ನಡುವೆ ಸಾಮರಸ್ಯದ ಕೊರತೆಯಿಂದ ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡು ಗ್ರಾಹಕರಿಗೆ ತೊಂದರೆ ನೀಡುತ್ತಿದ್ದಾರೆ. ಈ ಕ್ರಮದಿಂದ ಇತ್ತ ರೈತರಿಗೂ ಲಾಭವಾಗದೆ ಅತ್ತ ಗ್ರಾಹಕರಿಗೂ ನಷ್ಟವಾಗುತ್ತಿದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಪ್ರತಿದಿನ 51 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಅದರಲ್ಲಿ 30 ಲಕ್ಷ ಲೀಟರ್ ಮಾರಾಟವಾಗುತ್ತಿದೆ. ಉಳಿದ 20 ಲಕ್ಷ ಲೀಟರ್ ಹಾಲನ್ನು ಪೌಡರ್ ಮತ್ತು ಹಾಲಿನ ಉತ್ಪನ್ನಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಇಷ್ಟಾದರೂ ಕೆಎಂಎಫ್ ನಷ್ಟ ಅನುಭವಿಸುತ್ತಿದೆ. ಇದಕ್ಕೆ ಮುಖ್ಯ ಕಾರಣ ಕೆಎಂಎಫ್ನ ವೆಚ್ಚ. ವಾರ್ಷಿಕ 7,500 ಕೋಟಿ ಆದಾಯವಾಗುತ್ತಿದ್ದು, ಇದರಲ್ಲಿ ಶೇ.6 ರಷ್ಟನ್ನು ಯೋಜನೆ ಇಲ್ಲದೆ ಖರ್ಚು ಮಾಡಲಾಗುತ್ತಿದೆ. ಅಂದಾಜಿನ ಪ್ರಕಾರ ಶೇ.3 ರಷ್ಟನ್ನು ಮಾತ್ರ ಖರ್ಚು ಮಾಡಬೇಕು ಎಂದರು.
ಕಳ್ಳ ಹಾಲಿಗೆ ದಾರಿ: ಹಾಲು ಉತ್ಪಾದನೆ ಮಾಡುವ ರೈತರಿಗೆ 20 ನೀಡಲಾಗುತ್ತಿದೆ. ಅದೇ ಗ್ರಾಹಕರು 29 ನೀಡಿ ಹಾಲು ಖರೀದಿಸುತ್ತಿದ್ದಾರೆ. ಈ ನಡುವೆ ಕೆಎಂಎಫ್ಗೆ 9 ಲಾಭವಾಗುತ್ತಿದೆ. ಇಷ್ಟಿದ್ದರೂ ನಷ್ಟ ತೋರಿಸುತ್ತಾರೆ. ಏತನ್ಮಧ್ಯೆ ಹಾಲಿನ ದರ ಏರಿಸುವುದರಿಂದ ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವ ಇತರೆ ಕಂಪನಿಗಳ ಹಾಲನ್ನು ಖರೀದಿಸಲು ಜನ ಮುಗಿಬೀಳುತ್ತಾರೆ.
ಸದಸ್ಯರಾದ ಆರ್. ಲಿಂಗಪ್ಪ, ಎಂ.ಜೆ. ರವಿಕುಮಾರ್, ಕೆ.ವಿ. ಮಲ್ಲೇಶ್, ಮಹದೇವಪ್ಪ, ಜೆಡಿಎಸ್ ಮುಖಂಡ ಎಚ್. ವಾಸು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.