ಕೆಮ್ಮಣ್ಣು ತುಂಬಿ ಅಕ್ರಮವಾಗಿ ಮರಳು ಸಾಗಣೆ
ಕ.ಪ್ರ.ವಾರ್ತೆ ಟಿ. ನರಸೀಪುರ: ಸೆ. 12
ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು ಕಾರ್ಯಾಚರಣೆಗಿಳಿದ ಪೊಲೀಸರು, ಮರಳು ಮಾಫಿಯಾದ ಅನ್ಯ ಮಾರ್ಗಗಳು ಪತ್ತೆಯಾದವು. ತಾಲೂಕಿನ ಢಣಾಯಕನಪುರ ಗ್ರಾಮದ ಬಳಿ ಸಿಕ್ಕಿ ಬಿದ್ದ ಟಿಪ್ಪರ್‌ನಲ್ಲಿ ಮರಳಿನ ಮೇಲೆ ಅಡಿಯಷ್ಟು ಕೆಮ್ಮಣ್ಣು ತುಂಬಲಾಗಿತ್ತು.
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಕೆ.ಆರ್. ಗೋಪಿಕೃಷ್ಣ ಅವರು ಅಕ್ರಮ ಮರಳು ಸಾಗಾಣಿಕೆಯ ವಿರುದ್ಧ ಕಾರ್ಯಾಚರಣೆ ಆರಂಭಿಸಿ, ಢಣಾಯಕನಪುರ ಬಳಿ ಮೈಸೂರಿಗೆ ತೆರಳುತ್ತಿದ್ದ ಟಿಪ್ಪರ್ ಅನ್ನು ಅನುಮಾನಗೊಂಡು ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದು ಖಚಿತವಾಯಿತು. ಟಿಪ್ಪರ್ ವಶಪಡಿಸಿಕೊಂಡ ಅವರು ಪ್ರಕರಣ ದಾಖಲಿಸಿದ್ದಾರೆ.
ಮತ್ತೊಂದು ಲಾರಿ ವಶ: ತಾಲೂಕಿನ ಕೆಂಡನಕೊಪ್ಪಲು ಗ್ರಾಮದಲ್ಲಿಯೂ ಅಕ್ರಮವಾಗಿ ಮರಳನ್ನು ತುಂಬುತ್ತಿದ್ದ ಲಾರಿಯೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಳೇ ಸಂತೇಮಾಳದ ಬಳಿ ನದಿಯಲ್ಲಿ ಅಕ್ರಮವಾಗಿ ಮರಳನ್ನು ತುಂಬುತ್ತಿದ್ದ ಎತ್ತಿನ ಗಾಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಮುಖ್ಯಪೇದೆ ಮೂರ್ತಿ, ಪೇದೆಗಳಾದ ಶ್ರೀನಿವಾಸ್, ಜಯಕುಮಾರ್, ಲೋಕೋಪಯೋಗಿ ಇಲಾಖೆಯ ರಾಜೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

