ದೈಹಿಕ ಶಿಕ್ಷಣವನ್ನೂ ಗಂಭೀರವಾಗಿ ಪರಿಗಣಿಸಿ
ಕ.ಪ್ರ.ವಾರ್ತೆ ಮೈಸೂರು ಸೆ. 12
ಸಾಂಪ್ರದಾಯಿಕ ಶಿಕ್ಷಣ ನೀಡುವುದರ ಜೊತೆಗೆ ದೈಹಿಕ ಶಿಕ್ಷಣವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಮೈಸೂರು ವಿವಿ ಕುಲಸಚಿವ ಪ್ರೊ.ಸಿ. ಬಸವರಾಜು ಹೇಳಿದರು.
ಮೈಸೂರು ವಿವಿ ಜೆಮ್ನೇಶಿಯಂ ಸಭಾಂಗಣದಲ್ಲಿ ಗುರುವಾರ ನಡೆದ ಅಂತರ ಕಾಲೇಜು ಜಿಮ್ನಾಸ್ಟಿಕ್ಸ್, ಈಜು, ಯೋಗ, ಕುಸ್ತಿ ಭಾರ ಎತ್ತುವ ಹಾಗೂ ಅತ್ಯುತ್ತಮ ದೇಹದಾರ್ಢ್ಯ ಸ್ಪರ್ಧೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಸಾಂಪ್ರದಾಯಿಕ ಶಿಕ್ಷಣ ನೀಡುವುದರ ಜೊತೆಗೆ ದೈಹಿಕ ಶಿಕ್ಷಣವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ವಿದ್ಯಾರ್ಥಿಗಳು ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ಕಾನೂನಿನಂತೆ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಲು ಕ್ರೀಡಾ ಶಿಕ್ಷಣ ನೆರವಾಗುತ್ತದೆ ಎಂದರು.
ಶಿಕ್ಷಣದ ಅರಿವಿನ ಜೊತೆಗೆ ಆರೋಗ್ಯದ ಅರಿವು ಮೂಡುವುದು ಕ್ರೀಡಾ ಶಿಕ್ಷಣದಲ್ಲಿ ಮಾತ್ರ. ಕ್ರೀಡಾ ಶಿಕ್ಷಣದಲ್ಲಿನ ಶಿಸ್ತು, ಸಭ್ಯತೆ, ಗಾಂಭೀರ್ಯ ಕ್ರೀಡಾ ಶಿಕ್ಷಕರು ಮತ್ತು ತರಬೇತುದಾರರ ಶ್ರಮದ ಫಲ. ರಾಜ್ಯ, ಕೇಂದ್ರ ಸರ್ಕಾರಗಳ ಉತ್ತೇಜನದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ. ಕೃಷ್ಣ ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಎಸ್. ಕೃಷ್ಣಕುಮಾರ್ ವಂದಿಸಿದರು. ಬಿ.ಡಿ. ಕಾಂತರಾಜು ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

