ಮೈಸೂರು

ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 9.3 ಕೋಟಿ ಬಿಡುಗಡೆ

Published On :

ಕ.ಪ್ರ.ವಾರ್ತೆ  ಸಾಲಿಗ್ರಾಮ  ಸೆ. 12
ಸಿಂಗನಹಳ್ಳಿಯಿಂದ ಕೇರಳಾಪುರದವರಗೆ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 9.3 ಕೋಟಿ ಹಣ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು. ಕೆ.ಆರ್. ಪೇಟೆ ತಾಲೂಕಿನ ಗಡಿಗ್ರಾಮವಾದ ಸಿಂಗನಹಳ್ಳಿಯಿಂದ ಭೇರ್ಯ, ಸಾಲಿಗ್ರಾಮ, ಹರದನಹಳ್ಳಿ ಮಾರ್ಗವಾಗಿ ಅರಕಲಗೂಡು ತಾಲೂಕಿನ ಕೊನೆಯ ಭಾಗವಾದ ಕೇರಳಾಪುರದವರೆಗೆ ಇರುವ ರಸ್ತೆಯನ್ನು ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸರ್ಕಾರದಿಂದ ಬಿಡುಗಡೆಯಾಗಿರುವ ಹಣದಿಂದ ಕಾಮಗಾರಿಯನ್ನು ಶೀಘ್ರದಲ್ಲೆ ಆರಂಭಿಸಲಾಗುವುದು. ಆ ಮೂಲಕ ಈ ಭಾಗದ ಜನತೆಯ ಬಹುದಿನದ ಕನಸು ಈಡೇರಿದಂತಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಜೊತೆಗೆ ಕೆ.ಆರ್. ನಗರ ತಾಲೂಕಿನ ದೊಡ್ಡೆಕೊಪ್ಪಲು ಗ್ರಾಮದಿಂದ ಕೆ.ಆರ್. ನಗರ, ಹಂಪಾಪುರ, ಹೊಸಅಗ್ರಹಾರ, ಭೇರ್ಯ ಮಾರ್ಗವಾಗಿ ಮುಂಜನಹಳ್ಳಿ ಗ್ರಾಮದವರೆಗಿನ ರಾಜ್ಯ ಹೆದ್ದಾರಿ ರಸ್ತೆಯ ದುರಸ್ತಿ ಕಾರ್ಯಕ್ಕೆ 2 ಕೋಟಿ ಸರ್ಕಾರದಿಂದ ಬಿಡುಗಡೆಯಾಗಿದ್ದು, ಮಳೆಗಾಲದ ನಂತರ ಈ ಕಾಮಗಾರಿಯನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಆದ್ಯತೆ ಅನುಸಾರ ತಾಲೂಕಿನ ವಿವಿಧ ಭಾಗಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.