ಮೈಸೂರು

ಸೇವಾ ತೆರಿಗೆ ಕುರಿತು ಅರಿವು ಅಗತ್ಯ: ಚಂದ್ರಶೇಖರ್

Published On :

ಕ.ಪ್ರ.ವಾರ್ತೆ  ಮೈಸೂರು  ಸೆ. 12
ಸಾಮಾನ್ಯ ಸೇವಾ ತೆರಿಗೆ ಕುರಿತು ಹೆಚ್ಚಿನ ಅರಿವು ಅಗತ್ಯ ಎಂದು ಕೇಂದ್ರ ಅಬಕಾರಿ ಮತ್ತು ಸೇವಾ ತೆರಿಗೆ ಇಲಾಖೆ ಮೈಸೂರು ವಲಯದ ಆಯುಕ್ತ ಜೆ.ಎಸ್. ಚಂದ್ರಶೇಖರ್ ಹೇಳಿದರು.
ಭಾರತೀಯ ಕೈಗಾರಿಕಾ ಒಕ್ಕೂಟವು ಗುರುವಾರ ಏರ್ಪಡಿಸಿದ್ದ ಸ್ವಯಂ ನಿಯಮಪಾಲನೆ ಪ್ರೋತ್ಸಾಹ ಯೋಜನೆ 2013 (ವಿಸಿಇಎಸ್) ಮತ್ತು ಸಾಮಾನ್ಯ ಸೇವಾ ತೆರಿಗೆ ಸಮಸ್ಯೆಗಳು ಕುರಿತ ಸಂವಾದದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಸೇವಾ ತೆರಿಗೆ ಕಾಯ್ದೆಯನ್ನು ಜಾರಿಗೊಳಿಸಿದ್ದರೂ ಅದನ್ನು ಪಾಲಿಸುವವರ ಸಂಖ್ಯೆ ತೀರಾ ಕಡಿಮೆ. ಈ ಸಂಬಂಧ ಅನೇಕ ಪ್ರಕರಣಗಳು ಇದರ ವ್ಯಾಪ್ತಿಯಲ್ಲಿ ಇತ್ಯರ್ಥವಾಗದೆ ಉಳಿದಿದೆ. ಆದ್ದರಿಂದ ಶೀಘ್ರ ಕಡತ ವಿಲೇವಾರಿಗೆ ಹಾಗೂ ತೆರಿಗೆದಾರರ ಸುಲಭ ವಿಧಾನಕ್ಕೆ ವಿಸಿಇಎಸ್ ಯೋಜನೆಯು ಸಹಕಾರಿಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಲ್ಲಿ ಮುಂದಾಗಬೇಕು ಎಂದರು. ಮುಖ್ಯ ಅತಿಥಿಯಾಗಿ ಮಾತನಾಡಿದ ರಂಗಸನ್ಸ್ ಎಲೆಕ್ಟ್ರಾನಿಕ್ಸ್ ವ್ಯವಸ್ಥಾಪಕ ಕೆ.ಎನ್. ಫಣೀಶ್, 1994 ರಲ್ಲಿ ಸೇವಾ ತೆರಿಗೆ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಯಿತು. ಆದರೆ ಅದು ಅನುಷ್ಠಾನವಾಗುವ ಹೊತ್ತಿಗೆ ಅನೇಕ ತಿದ್ದುಪಡಿ ಪಡೆಯಿತು. ಈ ಕಾಯ್ದೆಯಷ್ಟು ತಿದ್ದುಪಡಿ ಪಡೆದ ಮಸೂದೆ ಮತ್ತೊಂದಿಲ್ಲ. ಇದರಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ ಎಂದು ತಿಳಿಸಿದರು. ಕೇಂದ್ರ ಅಬಕಾರಿ ಮತ್ತು ಸೇವಾ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಗೋಸ್ವಾಮಿ ಸಹಾಯಕ ಆಯುಕ್ತ ಜೆ. ದರ್ಶನ್ ಮುಖ್ಯ ಅತಿಥಿಗಳಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.