ಎಂಡಿಎ ವಿರುದ್ಧ ಲೋಕಾಯುಕ್ತ ತನಿಖೆಗೆ ಆಗ್ರಹ
ಕ.ಪ್ರ.ವಾರ್ತೆ ಮೈಸೂರು ಸೆ. 13
ಎಂಡಿಎನಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಆಯುಕ್ತರು, ಕಾರ್ಯದರ್ಶಿಗಳು, ತಹಸೀಲ್ದಾರರು, ಎಂಜಿನಿಯರ್‌ಗಳು ಮತ್ತು ವಿವಿಧ ಹಂತದ ನೌಕರರ ಆಸ್ತಿಯ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.
ಎಂಡಿಎ ಸಾರ್ವಜನಿಕ ಉದ್ದೇಶಕ್ಕಾಗಿ ರೈತರಿಂದ ವಶಪಡಿಸಿಕೊಂಡ ಭೂಮಿಯನ್ನು ಸೂಕ್ತ ಕಾರಣಗಳಿಗಾಗಿ ಭೂ ಸ್ವಾಧೀನದಿಂದ ಕೈಬಿಡಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು. ಎಂಡಿಎ ಅಧ್ಯಕ್ಷರು, ಆಯುಕ್ತರು, ತಹಸೀಲ್ದಾರರು, ಕಾರ್ಯದರ್ಶಿ, ಎಂಜಿನಿಯರ್‌ಗಳು ಹಾಗೂ ವಿವಿಧ ಹಂತದ ನೌಕರ ಸಿಬ್ಬಂದಿ ಹೊಂದಿದ್ದು, ಅಗತ್ಯ ಮೂಲಸೌಲಭ್ಯಗಳಿಂದಾಗಿ ಸಾರ್ವಜನಿಕರಿಗೆ ಮನೆ ನಿವೇಶನ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಎಂಡಿಎ ಅನುಮೋದನೆ ಪಡೆದ ಖಾಸಗಿ ಗೃಹ ನಿರ್ಮಾಣ ಸಂಘಗಳ ಮೂಲಕ ಸುಳ್ಳು ಪ್ರಮಾಣ ಪತ್ರ ನೀಡಿ ಕಾನೂನು ಉಲ್ಲಂಘಿಸಿ ಒಂದಕ್ಕಿಂತ ಹೆಚ್ಚು ನಿವೇಶನ ಪಡೆದುಕೊಂಡಿರುವ ಬಗ್ಗೆ ತನಿಖೆ ನಡೆಸಿ ಮಂಜೂರಾತಿ ಪಡಿಸಿ ನಿವೇಶನ ಮುಟ್ಟುಗೋಲು ಹಾಕಿಕೊಳ್ಳಬೇಕು. ಜತೆಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ನಿವೇಶನಕ್ಕೆ ಅರ್ಜಿ ಸಲ್ಲಿಸಿದ ಪ್ರಯತ್ನಗಳು ಮತ್ತು ವಯಸ್ಸಿಗೆ ಪ್ರಾಧಾನ್ಯತೆ ನೀಡದೆ ಹತ್ತು ವರ್ಷಕ್ಕಿಂತ ಹೆಚ್ಚು ಅವಧಿಯಿಂದ ನೋಂದಣಿ ಮಾಡಿಸಿ ಕಾಯುತ್ತಿರುವವರಿಗೆ ಕೂಡಲೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರದಿಂದ ಜಿ- ಕೆಟಗರಿಯಲ್ಲಿ ಸುಳ್ಳು ಮಾಹಿತಿ ನೀಡಿ ನಿವೇಶನ ಪಡೆದುಕೊಂಡಿರುವ ಹಾಗೂ ಮಾರಾಟ ಮಾಡಿ ಲಾಭ ಮಾಡಿಕೊಂಡ ಫಲಾನುಭವಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎಚ್.ಎನ್. ನಂಜುಂಡರಾಜು, ಚೌಡಹಳ್ಳಿ ಜವರಯ್ಯ, ದ್ಯಾವಪ್ಪನಾಯಕ, ಎಸ್. ಶ್ರೀಧರ್‌ಬೆಟ್ಟ, ಸಿ. ಮಹದೇವು, ನಿರ್ಮಲಕುಮಾರಿ, ಪ್ರಕಾಶ್, ಎಂ.ಎನ್. ಸತ್ಯಾನಂದವಿಟ್ಟು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

