ಹನಗೋಡಿಗೆ ಪದವಿ ಕಾಲೇಜು
ಕ.ಪ್ರ.ವಾರ್ತೆ ಹುಣಸೂರು ಸೆ. 13
ಹನಗೋಡು ಹೋಬಳಿಯ ಕಾಡಂಚಿನ ಪ್ರದೇಶದಲ್ಲಿ ಕಾಲೇಜು ಇಲ್ಲದಿರುವುದನ್ನು ಮನಗಂಡು, ಪದವಿ ಕಾಲೇಜಿಗೆ ಮಂಜೂರಾತಿ ಮಾಡಿಸಿರುವುದಾಗಿ ಶಾಸಕ ಎಚ್.ಪಿ. ಮಂಜುನಾಥ್ ಹೇಳಿದರು.
ತಾಲೂಕಿನ ಹನಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ಎರಡು ಕೋಟಿ ರು. ವೆಚ್ಚದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಹನಗೋಡು ಹೋಬಳಿಯು ರಾಷ್ಟ್ರೀಯ ಉದ್ಯಾನ ಅಂಚಿನಲ್ಲಿರುವುದರಿಂದ ಪೋಷಕರು ಹೆಣ್ಣು ಮಕ್ಕಳನ್ನು ಪದವಿ ಶಿಕ್ಷಣಕ್ಕೆ 15 ಕಿ.ಮೀ ದೂರದ ಪಟ್ಟಣಕ್ಕೆ ಕಳುಹಿಸದಿರುವುದರಿಂದ, ಉನ್ನತ ಶಿಕ್ಷಣದಿಂದ ಸಾಕಷ್ಟು ಹೆಣ್ಣುಮಕ್ಕಳು ವಂಚಿತರಾಗಿದ್ದಾರೆ ಎಂದು ವಿಷಾದಿಸಿದರು.
ಹನಗೋಡಿನ ಪದವಿ ಕಾಲೇಜು ಹಾಲಿ ಹಾರಂಗಿ ವಸತಿ ಗೃಹ ಮತ್ತು ಮರದ ಕೆಳಗೆ ಪಾಠ ಪ್ರವಚನ ನಡೆಯುತ್ತಿದ್ದು, ವೈಯಕ್ತಿಕವಾಗಿ ಐದು ಲಕ್ಷ ರು. ವೆಚ್ಚದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಡುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಭಾಗದಲ್ಲಿ ಅತಿ ಹೆಚ್ಚು ಮಳೆ ಜೊತೆಗೆ ಕಪ್ಪು ಮಣ್ಣಿನಿಂದ ಕೂಡಿದ ಪ್ರದೇಶವಾಗಿದ್ದು, ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿರುವ ಗೃಹ ಮಂಡಳಿ ಎಂಜಿಯರ್‌ಗಳು ಗುಣಮಟ್ಟ ಕಾಪಾಡುವಂತೆ ಎಚ್ಚರಿಕೆ ನೀಡಿದರು.
ತಾಪಂ ಅಧ್ಯಕ್ಷೆ ದೇವಕಿ, ಸದಸ್ಯೆ ಪರಮೇಶ್ವರಿ, ಗ್ರಾಪಂ ಅಧ್ಯಕ್ಷೆ ಮಂಜುಳ, ಗೃಹ ಮಂಡಳಿಯ ಇಇ ಉದಯಶಂಕರ್, ಎಇಇ ಸೋಮಶೇಖರ್, ತಾಲೂಕು ಬಿಜೆಪಿ ಅಧ್ಯಕ್ಷ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು, ಮುಖಂಡ ಹಂದನಳ್ಳಿ ಸೋಮಶೇಖರ್, ಸಿಡಿಸಿ ಸದಸ್ಯರಾದ ಸುಧಾಮಣಿ, ಸಂಜೀವ, ಕಿರಂಗೂರು ಸ್ವಾಮಿ, ಕೃಷ್ಣೇಗೌಡ, ಮಹದೇವ, ಚಿನ್ನಪ್ಪ, ಗ್ರಾಪಂ ಸದಸ್ಯರಾದ ಆನಂದ್, ಮಹೇಂದ್ರ, ನಾಗಮ್ಮ, ಅಸ್ರಕ್, ಸಾವರ್, ಮಧು, ರಾಮೇಗೌಡ, ಮಹದೇವೇಗೌಡ, ಪ್ರಾಂಶುಪಾಲ ಡಾ. ಮಹದೇವಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

