ಸುದ್ದಿ ಸಂಕ್ಷೇಪ
ಸಂಸದರಿಂದ ಅಹವಾಲು ಸ್ವೀಕಾರ
ಮೈಸೂರು: ಮೈಸೂರು ಸಂಸದ ಎಚ್. ವಿಶ್ವನಾಥ್ ಸೆ.15 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಕೆ.ಆರ್. ನಗರದ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ಸಂಜೆ 5ಕ್ಕೆ ಮೈಸೂರು ಎಂಜಿನಿಯರಗಳ ಸಂಸ್ಥೆಯಲ್ಲಿ ನಡೆಯುವ ಎಂಜಿನಿಯರಗಳ ದಿನಾಚರಣೆಯಲ್ಲಿ ಭಾಗವಹಿಸುವರು. 16 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ನಜರಬಾದಿನಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಹವಾಲು ಸ್ವೀಕರಿಸುವರು.
ನಿವೇಶನದ ಖಾತೆ ರದ್ದು
ಮೈಸೂರು: ಮೈಸೂರು ವಿವಿ ಗೃಹ ನಿರ್ಮಾಣ ಸಹಕಾರ ಸಂಘದ ಬಡಾವಣೆಯ ನಿವೇಶನ ಸಂಖ್ಯೆ 53/ಎ ಖಾತೆಯನ್ನು ಎಂಡಿಎ ಆಯುಕ್ತರು ರದ್ದುಪಡಿಸಿರುವುದಕ್ಕೆ ರಾಜೀವನಗರದ ಶ್ರೀ ದುರ್ಗಾಪರಮೇಶ್ವರಿ ಯುವಕರ ಸಂಘ ಕೃತಜ್ಞತೆ ಸಲ್ಲಿಸಿದೆ. ಈ ಸಂಘದಲ್ಲಿ ಇದೇ ರೀತಿ ಭಾರಿ ಅವ್ಯವಹಾರಗಳು ನಡೆದಿದ್ದು, ಇದರ ಬಗ್ಗೆ ಜಿಲ್ಲಾಧಿಕಾರಿಗಳು, ಎಂಡಿಎ ಆಯುಕ್ತರು, ಸಹಕಾರ ಇಲಾಖಾ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸಂಘದ ಪದಾಧಿಕಾರಿಗಳು ಹಾಗೂ ಎಂಡಿಎ ಗುಮಾಸ್ತ ಸೇರಿದಂತೆ ಶಾಮೀಲಾಗಿರುವ ಎಲ್ಲರ ವಿರುದ್ಧ ಉಗ್ರ ಕ್ರಮ ಕೈಗೊಳ್ಳುವಂತೆ ಸಂಘದ ಕಾರ್ಯದರ್ಶಿ ಕೆ. ರವಿಶಂಕರ ಒತ್ತಾಯಿಸಿದ್ದಾರೆ.
ಎಂ.ಫಿಲ್ಗೆ ಅರ್ಜಿ ಆಹ್ವಾನ
ಮೈಸೂರು: ಮೈಸೂರು ವಿವಿಯು 2013-14ನೇ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ಪ್ರಾರಂಭವಾಗಿರುವ ಎಂ.ಫಿಲ್ನಲ್ಲಿ ಕರ್ನಾಟಕ ಕ್ಷೇತ್ರ ಅಧ್ಯಯನಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆ.20 ಕಡೆ ದಿನ. ಹೆಚ್ಚಿನ ಮಾಹಿತಿಗಾಗಿ ಮೈಸೂರು ವಿವಿ ವೆಬ್ಸೈಟ್ ಢಿಢಿಢಿ.್ಡಟ್ಝಿ-ಟಣಡ.ಛ್ಛ.್ಝಟಿ ಸಂಪರ್ಕಿಸಬಹುದು.
ಸಂಶೋಧನೆಗೆ ಅರ್ಜಿ ಆಹ್ವಾನ
ಮೈಸೂರು: ನವದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಾಯೋಜಿತ ಸಂಶೋಧನಾ ಯೋಜನೆಯಡಿ ಒಂದು ಕಿರಿಯ ಸಂಶೋಧನಾ ವಿದ್ಯಾರ್ಥಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕನಿಷ್ಠ ಶೆ.55 ಅಂಕಗಳೊಂದಿಗೆ ಎಂ.ಎಸ್ಸಿ (ಭೌತವಿಜ್ಞಾನ) ಪದವಿ ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಬಿಳಿಯ ಹಾಳೆಯಲ್ಲಿ ಶೈಕ್ಷಣಿಕ ಅರ್ಹತೆ, ಅನುಭವ ಮುಂತಾದ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ದೃಢೀಕರಿಸಲಾದ ಪ್ರಮಾಣಪತ್ರ ಪ್ರತಿಗಳನ್ನು ಡಾ.ಎ.ಪಿ. ಜ್ಞಾನಪ್ರಕಾಶ್, ಸಹ ಪ್ರಾಧ್ಯಾಪಕರು, ಭೌತಶಾಸ್ತ್ರ ಅಧ್ಯಯನ ವಿಭಾಗ, ಮೈ ಸೂರು ವಿವಿಗೆ ಸಲ್ಲಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

