ಮೈಸೂರು

ನಾಳೆ ನಮನ ವಿಶ್ವಕರ್ಮ ಕೃತಿ ಬಿಡುಗಡೆ

Published On :

ಮೈಸೂರು: ಇಲ್ಲಿನ ಕಲಾಮಂದಿರದಲ್ಲಿ ಸೆ.17 ರಂದು ವಿಶ್ವಕರ್ಮ ಜಯಂತಿ ಹಾಗೂ ನಮನ ವಿಶ್ವಕರ್ಮ ಕೃತಿ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಈ ಜಯಂತಿಯನ್ನು ಅಂದು ಆಚರಿಸುತ್ತಿದ್ದು, ಅಂತೆಯೇ ಜಿಲ್ಲೆಯಲ್ಲೂ ಸಹ ಜಯಂತಿ ಹಮ್ಮಿಕೊಳ್ಳಲಾಗಿದೆ. ಕವಿ ಸಿದ್ದಾಚಾರ್ ರಚಿಸಿರುವ ನಮನ ಕೃತಿಯನ್ನು ಅಂದು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಟಿ. ಆಚಾರ್ಯ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಾಲ್ಮೀಕಿ, ಕನಕ ಮುಂತಾದ ಮಹನೀಯರ ಜಯಂತಿಯನ್ನು ಸರ್ಕಾರ ಆಚರಿಸುವಂತೆ, ವಿಶ್ವಕರ್ಮ ಜಯಂತಿಯನ್ನೂ ಆಚರಿಸಬೇಕು. ಆ ದಿನ ರಜಾ ಘೋಷಿಸಬೇಕು. ಅಲ್ಲದೆ ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಈ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಕೊಟ್ಟು, ರಾಜಕೀಯ ಶಕ್ತಿ ತುಂಬಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ಆಗ್ರಹಿಸಿದರು. ಅಂದು ಬೆಳಗ್ಗೆ 11ಕ್ಕೆ ನಡೆಯಲಿರುವ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಶಾಸಕ ಎಂ.ಕೆ. ಸೋಮಶೇಖರ್ ಉದ್ಘಾಟಿಸುವರು. ಶಾಸಕರಾದ ವಾಸು, ರಘು ಆಚಾರ್, ಸಿ.ಎಚ್. ವಿಜಯಶಂಕರ್, ಮೇಯರ್ ಎನ್.ಎಂ. ರಾಜೇಶ್ವರಿ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.