ಮೈಸೂರು

'ಸಹಕಾರಿ ಸಂಘಗಳು ಸಮಾಜ ಮುಖಿಯಾಗಲಿ'

Published On :

ಕ.ಪ್ರ.ವಾರ್ತೆ  ಮೈಸೂರು  ಸೆ. 15
ಯಾವುದೇ ಸಹಕಾರಿ ಸಂಘಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಮೈಸೂರು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎನ್. ಕೃಷ್ಣಮೂರ್ತಿ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘವು ನಜರಬಾದಿನ ಕಚೇರಿ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ 2012 -13ನೇ ಸಾಲಿನ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಇಲಾಖೆಯಲ್ಲಿ ಕೆಲಸ ಮಾಡುವ ಸಿ ಮತ್ತು ಡಿ ದರ್ಜೆಯ ನೌಕರರಿಗೂ ಕನಿಷ್ಠ ಬೆಲೆಯಲ್ಲಿ ಅಧಿಕ ಸೌಲಭ್ಯಗಳನ್ನು ಒಳಗೊಂಡಿರುವ ಹಾಗೂ ನಗರಕ್ಕೆ ಹತ್ತಿರದಲ್ಲಿನ ನಿವೇಶನಗಳನ್ನು ಒದಗಿಸುವಲ್ಲಿ ಸಂಘವು ಶ್ರಮ ವಹಿಸಬೇಕು ಎಂದು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಬಿ. ರಾಜು ಮಾತನಾಡಿ, 2013-14ನೇ ಸಾಲಿಗೆ ನಿವೇಶನಗಳ ಹಕ್ಕು ಪತ್ರಗಳನ್ನು ಮೂಲಸೌಕರ್ಯ ಒದಗಿಸಿದ ನಂತರ ವಿತರಿಸಲಾಗುವುದು. ಮುಂದಿನ ದಿನಗಳಲ್ಲಿ ಮಾದರಿ ಬಡಾವಣೆ ನಿರ್ಮಿಸುವ ಗುರಿಯಿದೆ. ನೌಕರರು ಸದಸ್ಯತ್ವ ಪಡೆಯಲು ಮುಂದಾಗಬೇಕು ಎಂದರು.
ಅಧೀಕ್ಷಕ ಎಂಜಿನಿಯರ್ ಸಿ.ಸತ್ಯನಾರಾಯಣ್, ಕಾರ್ಯಪಾಲಕ ಎಂಜಿನಿಯರಗಳಾದ ಸುರೇಶ್, ವಿ. ರಾಮಕೃಷ್ಣ, ಚುಂಚೇಗೌಡ, ನಿರ್ದೇಶಕರಾದ ಕೆ.ಎನ್. ಜಗದೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.