ಸುದ್ದಿ ಸಂಕ್ಷೇಪ
ಪದವಿ ಕೋರ್ಸಿಗೆ ಪ್ರವೇಶ ಆರಂಭ
ಎಚ್.ಡಿ. ಕೋಟೆ: ಪಟ್ಟಣದ ಶ್ರೀ ಆದಿಚುಂಚನಗಿರಿಯ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅಧ್ಯಯನ ಕೇಂದ್ರದಲ್ಲಿ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭಿಸಲಾಗಿದೆ. 2013-14ನೇ ಸಾಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷಗಳ ಬಿ.ಎ, ಬಿ.ಕಾಂ, ಎಂ.ಎ, ಎಂ.ಕಾಂ, ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ದಂಡ ಶುಲ್ಕವಿಲ್ಲದೆ ಅ.23 ರೊಳಗೆ ಪ್ರವೇಶಾತಿ ಪಡೆಯಬಹುದು. ನಂತರ ಪ್ರವೇಶಾತಿ ಬಯಸುವವರು 200 ದಂಡದೊಂದಿಗೆ ನ.8 ರೊಳಗೆ ಹಾಗೂ 400 ದಂಡದೊಂದಿಗೆ ಡಿ.20 ರೊಳಗೆ ಪ್ರವೇಶಾತಿ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.
ಆರೋಗ್ಯ ತಪಾಸಣೆ
ಹುಣಸೂರು: ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ವಾಜಪೇಯಿ ಆರೋಗ್ಯಶ್ರೀ ಆರೋಗ್ಯ ತಪಾಸಣೆ ಶಿಬಿರವನ್ನು ಸೆ.17ರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಪಟ್ಟಣದ ಸರ್ಕಾರಿ ಆಸ್ಪತ್ರೆ ಏರ್ಪಡಿಸಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಹೃದ್ರೋಗ, ಹೃದಯ ಶಸ್ತ್ರ ಚಿಕಿತ್ಸೆ, ನರರೋಗ ಶಸ್ತ್ರಚಿಕಿತ್ಸೆ, ಮೂತ್ರರೋಗ, ಗ್ರಂಥಿ ಶಸ್ತ್ರಚಿಕಿತ್ಸೆ, ವಿವಿಧ ದೈಹಿಕ ಆಘಾತಗಳಿಗೆ ಉಚಿತ ತಪಾಸಣೆ ನಡೆಸಲಾಗುತ್ತದೆ. 99806 76204 ಸಂಪರ್ಕಿಸಿ.
ನೇಮಕ
ಟಿ. ನರಸೀಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಟಿ.ನರಸೀಪುರ ಶಾಖೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನ್ಯಾಯಾಂಗ ಇಲಾಖೆಯ ಪ್ರೋಸೆಸ್ ಸರ್ವರ್ ಜಿ. ಮಹದೇವ ನೇಮಕವಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

