ಮೈಸೂರು

ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ

Published On :

ಕ.ಪ್ರ.ವಾರ್ತೆ  ಮೈಸೂರು  ಸೆ. 15
ಒಂಟಿಕೊಪ್ಪಲಿನಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ಸಾರ್ವಜನಿಕ ವಿದ್ಯಾರ್ಥಿನಿಯರ ನಿಲಯದ ಅವ್ಯವಸ್ಥೆ ವಿರುದ್ಧ ಅಲ್ಲಿನ ನೂರಾರು ವಿದ್ಯಾರ್ಥಿನಿಯರು ಭಾನುವಾರ ಪ್ರತಿಭಟಿಸಿದರು.
ಹಾಸ್ಟೆಲ್ನಲ್ಲಿ 30 ಕೊಠಡಿಗಳಿದ್ದು, ಪ್ರತಿ ಕೊಠಡಿಗೆ 20ಕ್ಕೂ ಹೆಚ್ಚು ಮಂದಿ ತುಂಬಲಾಗಿದೆ. ನಿಲಯದಲ್ಲಿ ಒಟ್ಟಾರೆ 700 ವಿದ್ಯಾರ್ಥಿನಿಯರಿದ್ದು, 600 ಮಂದಿಗೆ ಮಾತ್ರ ಕೊಠಡಿ ಇದೆ. ಉಳಿದ 100 ಮಂದಿಗೆ ಕೊಠಡಿಗಳಿಲ್ಲದೆ ಹೊರಗಡೆ ಮಲಗುವಂತಾಗಿದೆ ಎಂದು ಆರೋಪಿಸಿದರು.
700 ವಿದ್ಯಾರ್ಥಿನಿಯರಿಗೆ 4 ಶೌಚಾಲಯಗಳು ಮಾತ್ರ ಇದೆ. ಶೌಚಾಲಯಕ್ಕೆ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಸರಿಯಾಗಿ ನೀರು ಸರಬರಾಜು ಮಾಡುತ್ತಿಲ್ಲ. ಕೊಠಡಿಗಳಲ್ಲಿ ಅಗತ್ಯ ಸೌಲಭ್ಯ ಇಲ್ಲ. ಅಡುಗೆ ಸರಿಯಾಗಿ ಮಾಡದಿರುವುದರಿಂದ ಹಲವರು ಊಟ ಮಾಡುತ್ತಿಲ್ಲ. ಇದರಿಂದ ಪ್ರತಿದಿನ ಸಾಕಷ್ಟು ಆಹಾರ ವ್ಯರ್ಥ ಆಗುತ್ತಿದೆ ಎಂದು ದೂರಿದರು.
ಸಂಬಂಧಪಟ್ಟವರು ಹಾಸ್ಟೆಲ್ಗೆ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.