ಮೈಸೂರು

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಧರಣಿ

Published On :

ಕ.ಪ್ರ.ವಾರ್ತೆ  ಮೈಸೂರು  ಸೆ. 16
ಮಹಿಳಾ ಸುರಕ್ಷತೆ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ನಗರ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು. ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ ನೂರಾರು ಕಾಛರ್ಯಕರ್ತರು, ಅಣಕು ಪ್ರದರ್ಶನದ ಮೂಲಕ ಮಹಿಳಾ ರಕ್ಷಣೆಗೆ ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಆಗಮಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ನಾಗಾನಾಯಕ್ ಅವರಿಗೆ ಮನವಿ ಸಲ್ಲಿಸಿದರು.
ದೇಶದ ದುರವಸ್ಥೆಯನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಕ್ರಮ ಜಾರಿಗೊಳಿಸಬೇಕು. ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿ ಮಾಡಬೇಕು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಣೆಗಾಗಿ ಹೆಚ್ಚುವರಿ ಪೊಲೀಸರನ್ನು ನೇಮಿಸಬೇಕು. ವಿಶೇಷವಾಗಿ ಮಹಿಳಾ ಸಿಬ್ಬಂದಿ ನಿಯೋಜಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಆರ್.ರೀನಾ ಪ್ರಕಾಶ್, ನಗರಾಧ್ಯಕ್ಷೆ ಎ.ವಿದ್ಯಾ ಅರಸ್, ಬಿಜೆಪಿ ನಗರಾಧ್ಯಕ್ಷ ಈ. ಮಾರುತಿರಾವ್ ಪವಾರ್, ನಗರಪಾಲಿಕೆ ಸದಸ್ಯರಾದ ಮ.ವಿ. ರಾಮಪ್ರಸಾದ್, ಮಹದೇವಮ್ಮ, ಸ್ನೇಕ್ ಶ್ಯಾಮ್, ಎಂಡಿಎ ಮಾಜಿ ಅಧ್ಯಕ್ಷ ಎಲ್. ನಾಗೇಂದ್ರ, ಮುಖಂಡರಾದ ಸೋಮಸುಂದರ್, ಜಗದೀಶ್, ಶಿಂಧೆ ಇದ್ದರು.
ಗಾಂಧಿ ಚೌಕದಲ್ಲಿ: ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಗಾಂಧಿ ಚೌಕದಲ್ಲಿ ಪ್ರತ್ಯೇಕವಾಗಿ ಪ್ರತಿಭಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಹೇಮಂತ್‌ಕುಮಾರ್‌ಗೌಡ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.