ಕೃಷಿಯಲ್ಲಿ ತೊಡಗುವಂತೆ ರೈತರಿಗೆ ಪ್ರೋತ್ಸಾಹಿಸಿ
ಕ.ಪ್ರ.ವಾರ್ತೆ ಕೆ.ಆರ್. ನಗರ ಸೆ. 16
ರೈತರು ಕೃಷಿಯಿಂದ ವಿಮುಖರಾಗುತ್ತಿದ್ದು, ಇದರಿಂದ ಭವಿಷ್ಯದಲ್ಲಿ ಜನರು ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುವ ಸಂಭವವಿದ್ದು, ರೈತರನ್ನು ಪ್ರೋತ್ಸಾಹಿಸಿ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜನ ನೀಡದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೆಂಪರಾಜ ಅರಸ್ ಆತಂಕ ವ್ಯಕ್ತಪಡಿಸಿದರು. ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗ ಅರಸಿ ನಗರ ಪ್ರದೇಶಗಳತ್ತ ವಲಸೆ ಹೋಗುವವರ ಸಂಖ್ಯೆ ಹೆಚ್ಚುತ್ತಿದ್ದು, ಇದು ದುರದೃಷ್ಟಕರ ಎಂದರಲ್ಲದೆ, ರೈತರು ತಮ್ಮ ಕಸುಬಿನ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳಬೇಕೆಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿದರು. ತಾಲೂಕು ಯೋಜನಾಧಿಕಾರಿ ಬಿ. ಅಶೋಕ್, ಉದ್ಯಮಿ ಸಂಪತ್ಕುಮಾರ್, ಗ್ರಾಪಂ ಅಧ್ಯಕ್ಷೆ ಜಾನಕಮ್ಮ, ಯಜಮಾನರಾದ ಸುಂದರ್, ಜೆಡಿಎಸ್ ಮುಖಂಡ ಸುಜಯ್, ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಬಾಲರಾಜು, ತಾಲೂಕು ಒಕ್ಕೂಟದ ಅಧ್ಯಕ್ಷೆ ಗಾಯತ್ರಿ ಶಿವಣ್ಣ, ಬಸವೇಶ್ವರ ಸಂಘದ ಗೌರವಾಧ್ಯಕ್ಷ ದೀಪಕ್, ಪುಟ್ಟೇಗೌಡ, ಮೊಗಣ್ಣ, ಪ್ರಗತಿಪರ ರೈತ ಶಿವಣ್ಣ, ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

