ಪರೀಕ್ಷಾ ಶುಲ್ಕ ಏರಿಕೆಗೆ ವಿರೋಧ
ಕ.ಪ್ರ.ವಾರ್ತೆ ಕೆ.ಆರ್. ನಗರ ಸೆ. 16
ವಿಶ್ವವಿದ್ಯಾಲಯದವರು ಹೆಚ್ಚಿರುವ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು ಮತ್ತು ಕಳೆದ ಬಾರಿ ಪಡೆದಿದ್ದ ಹೆಚ್ಚುವರಿ ಹಣವನ್ನು ಸರ್ಕಾರದ ಆದೇಶದಂತೆ ವಿದ್ಯಾರ್ಥಿಗಳಿಗೆ ಹಿಂದಿರುಗಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಸೋಮವಾರ ಸಮಾವೇಶಗೊಂಡ ಎಸ್ಎಫ್ಐ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಗರುಡಗಂಭ ವೃತ್ತ, ಪುರಸಭಾ ವೃತ್ತ, ವಿವಿ ರಸ್ತೆಯಲ್ಲಿ ಮೆರವಣಿಗೆಯಲ್ಲಿ ತೆರಳಿ ತಾಲೂಕು ಕಚೇರಿ ಆವರಣದಲ್ಲಿ ಕೆಲಹೊತ್ತು ಪ್ರತಿಭಟನಾ ಧರಣಿ ನಡೆಸಿ ಮೈಸೂರು ವಿವಿ ವಿರುದ್ಧ ಧಿಕ್ಕಾರ ಕೂಗಿದರು.
ಕಳೆದ ಬಾರಿ ವಿದ್ಯಾರ್ಥಿಗಳಿಂದ ಪಡೆದಿದ್ದ ಹೆಚ್ಚುವರಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬೇಕೆಂದು ಸರ್ಕಾರ ಆದೇಶ ಹೊರಡಿಸಿದ್ದರೂ ಸಹ, ಇಲ್ಲಿಯ ತನಕ ಹಣ ಹಿಂದಿರುಗಿಸಿಲ್ಲ. ಜತೆಗೆ ಈ ಬಾರಿಯು ಪರೀಕ್ಷಾ ಶುಲ್ಕವನ್ನು ಶೇ.10 ರಷ್ಟು ಏರಿಕೆ ಮಾಡಿದೆ. ಇದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆಯಲು ಕಷ್ಟಸಾಧ್ಯವಾಗಿದೆ. ಆದ್ದರಿಂದ ಮೈಸೂರು ವಿವಿ ಕೂಡಲೆ ಏರಿಕೆ ಮಾಡಿರುವ ಶುಲ್ಕವನ್ನು ಕಡಿಮೆ ಮಾಡಬೇಕೆಂದು ಪ್ರತಿಭಟನಾ ನಿರತ ವಿಧ್ಯಾರ್ಥಿಗಳು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

