ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಿ: ರಘುನಂದನ್
ಕ.ಪ್ರ.ವಾರ್ತೆ ಮೈಸೂರು ಸೆ. 16
ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನತೆ ಮುಂದಾಗಬೇಕು ಎಂದು ಮೈಸೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ರಘುನಂದನ್ ಹೇಳಿದರು.
ಲಕ್ಷ್ಮೀ ಹಯಗ್ರೀವ ಪದವಿಪೂರ್ವ ಕಾಲೇಜು ಸೋಮವಾರ ಏರ್ಪಡಿಸಿದ್ದ ಸಂಭ್ರಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಯಾನ 2013ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಯತ್ತ ಹೆಚ್ಚು ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಸಂಸ್ಕೃತಿ ಕ್ಷೀಣಿಸುವತ್ತ ಸಾಗಿದೆ. ನಮ್ಮ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿದಾಗ ದೇಶವು ಹೆಚ್ಚಿನ ಅಭಿವೃದ್ಧಿ ಹೊಂದಲು ಸಾಧ್ಯ. ಈ ದಿಸೆಯಲ್ಲಿ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರಸ್ತುತ ಅವಶ್ಯಕ ಎಂದರು.
ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡಿದರೆ ಸಾಲದು, ಅವರನ್ನು ಸಂಸ್ಕಾರವಂತರಾಗಿ ರೂಪಿಸುವ ಹೊಣೆಗಾರಿಕೆ ಪೋಷಕರ ಜವಾಬ್ದಾರಿಯಾಗಬೇಕು. ಕೇವಲ ಅಂಕ, ಪದವಿ ಎಂಬುವುದಷ್ಟಕ್ಕೆ ತಂದೆ ತಾಯಿಗಳು ಒತ್ತಡ ಹೇರಬಾರದು. ಇಂತಹ ಪಠ್ಯೇತರ ಚಟುವಟಿಕೆಗಳಿಗೂ ಉತ್ತೇಜನ ನೀಡಿ ಅವರಲ್ಲಿ ವ್ಯಕ್ತಿತ್ವ ವಿಕಾಸನವಾಗಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಅಗತ್ಯ ಸಹಕಾರ: ಯಾವುದೇ ಕಾಲೇಜು ಕೇವಲ ಪದವಿಪೂರ್ವ ಹಾಗೂ ಪದವಿ ಹಂತದ ವಿದ್ಯಾರ್ಥಿಗಳಿಗೆ ಮಾತ್ರ ಇಂತಹ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸುವುದು ಸಹಜ. ಆದರೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಸಾಂಸ್ಕೃತಿಕ ಯಾನ ಆಯೋಜಿಸಿರುವುದು ಇದೇ ಮೊದಲು. ಈ ಸಂಸ್ಥೆಯು ಕಾಲೇಜು ಶಿಕ್ಷಣದ ಜತೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ತೆರೆಯಲು ಮುಂದಾದರೆ ಅದಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಬ್ರಹ್ಮತಂತ್ರ ಸ್ವತಂತ್ರ ಪರಕಾಲಸ್ವಾಮಿ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಆರ್. ಶ್ರೀನಿವಾಸನ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಹಿರಿಯ ಸಲಹೆಗಾರ ಡಾ.ಎಸ್. ರಾಘವ ಅಯ್ಯಂಗಾರ್, ಸಾಂಸ್ಕೃತಿಕ ಕೂಟದ ಸಂಚಾಲಕ ಎನ್.ಪಿ. ಸುಮಲತಾ ಹಾಗೂ ಎಂ.ಆರ್. ನಂದಿನಿ ಇದ್ದರು.
ನಂತರ ಕರ್ನಾಟಕ ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯ, ಜನಪದ ಗೀತೆ ಹಾಗೂ ಲಿಖಿತ ರಸಪ್ರಶ್ನೆ
ಸ್ಪರ್ಧೆ ನಡೆಯಿತು. ಸೆ.18 ರಂದು ನಡೆಯಲಿರುವ ಸಮಾರೋಪದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

