ಹೊಸೂರು: ಶಾಲಾ ಸಹಭಾಗಿತ್ವ ಕಾರ್ಯಕ್ರಮ
ಕ.ಪ್ರ.ವಾರ್ತೆ ಹೊಸೂರು ಸೆ. 17
ಸರ್ಕಾರಿ ಶಾಲೆಗಳು ಸಮಗ್ರವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಅಗತ್ಯ ಎಂದು ಹೊಸೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಟಿ. ಕೀರ್ತಿ ಹೇಳಿದರು.
ಕೆ.ಆರ್. ನಗರ ತಾಲೂಕು ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಸಹಭಾಗಿತ್ವ ಸಮೀಕ್ಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಗಳು ಶಿಕ್ಷಣಕ್ಕೆ ಮತ್ತು ಶಾಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರು.ಗಳನ್ನು ವ್ಯಯಿಸುತ್ತಿದ್ದು, ಅದರ ಸದ್ಬಳಕೆಯಾಗಬೇಕಾದರೆ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕೆಂದರು.
ಪೋಷಕರು ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಶಿಕ್ಷಕರೊಂದಿಗೆ ಮುಕ್ತವಾಗಿ ಚರ್ಚಿಸುವ ಪರಿಪಾಠ ಬೆಳೆಸಿಕೊಂಡರೆ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸಮನಾಗಿ ಗುಣಮಟ್ಟದ ಶಿಕ್ಷಣ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಸುಗಮಕಾರ ರಾಜೇಶ್ ಮಾತನಾಡಿ, ಶಾಲಾ ಸಹಭಾಗಿತ್ವ ಸಮೀಕ್ಷೆಯ ಉದ್ದೇಶ ಮತ್ತು ಅನುಕೂಲತೆಗಳ ಬಗ್ಗೆ ಮಾಹಿತಿ ನೀಡಿದರು. ಎಸ್ಬಿಎಂ ವ್ಯವಸ್ಥಾಪಕ ರಾಜುಬಲ್ಲವ ಮಾತನಾಡಿದರು.
ಎಸ್ಡಿಎಂಸಿ ಅಧ್ಯಕ್ಷ ಎಚ್.ಜೆ. ಆನಂದ, ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಮ್ಮ, ಹೊಸೂರು ಕೃಷಿ ಪತ್ತಿನ ಸಂಘದ ಉಪಾಧ್ಯಕ್ಷ ಡಿ.ಆರ್. ರಮೇಶ್, ನಿರ್ದೇಶಕರಾದ ಎಚ್.ಆರ್. ಮಹೇಶ್, ಸಿ.ಡಿ. ಪ್ರಭಾಕರ, ಕುಪ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಮುದ್ದನಹಳ್ಳಿತಿಮ್ಮೇಗೌಡ, ತಾಲೂಕು ಯುವ ಜೆಡಿಎಸ್ ಉಪಾಧ್ಯಕ್ಷ ಎಚ್.ಎಸ್. ಮಂಜುನಾಥ್, ಶಿಕ್ಷಕರಾದ ಮಂಜುನಾಥ ವಿಠಲ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

