ಮೈಸೂರು ಲೋಕಸಭಾ ಕ್ಷೇತ್ರಕ್ಕೆ ವಿಶ್ವನಾಥ್ ಅಭ್ಯರ್ಥಿ
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಿ ಹಾಲಿ ಸಂಸದ ಎಚ್.ವಿಶ್ವನಾಥ್ ಅವರನ್ನು ಮುತ್ತೆ ಕಣಕ್ಕಿಳಿಸಲು ಬುಧವಾರ ನಡೆದ ಕೆಪಿಸಿಸಿ ವೀಕ್ಷಕರ ಸಭೆ ನಿರ್ಣಯಿಸಿತು.
ಈ ಬಗ್ಗೆ ಕೆಪಿಸಿಸಿ ವೀಕ್ಷಕರಾದ ಸಿ.ಎಂ. ಲಿಂಗಪ್ಪ, ಮುನಿನರಸಿಂಹಯ್ಯ, ವಾಸಂತಿ ಶಿವಣ್ಣ ಅವರು, ಕೆಪಿಸಿಸಿ ಸದಸ್ಯರು, ಡಿಸಿಸಿ ಪದಾಧಿಕಾರಿಗಳು, ಶಾಸಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಬಹುಪಾಲು ಮಂದಿ ಪದಾಧಿಕಾರಿಗಳು ಹಾಲಿ ಸಂಸದ ಎಚ್. ವಿಶ್ವನಾಥ್ ಅವರನ್ನೆ ಮುಂದುವರಿಸುವಂತೆ ಸಹಮತ ವ್ಯಕ್ತಪಡಿಸಿದರು.
ಭೂಸ್ವಾಧೀನಕ್ಕೆ ಗ್ರಾಮಸ್ಥರ ವಿರೋಧ
ಕೋಲಾರ: ಅಭಿವೃದ್ಧಿ ಕಾರ್ಯಗಳಿಗಾಗಿ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರವು ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಅವಕಾಶ ನೀಡುವುದಿಲ್ಲವೆಂದು ತಾಲೂಕಿನ ಮಡೇರಹಳ್ಳಿ ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದ ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಪ್ರತಿಭಟನೆ ನಡೆಸಿ ಮಡೇರಹಳ್ಳಿ ಗ್ರಾಮಕ್ಕೆ ಸೇರಿದ ಜಮೀನುಗಳಲ್ಲಿ ಅನಾದಿಕಾಲದಿಂದಲೂ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದವರು ಯಾವುದೇ ಕಾರಣಕ್ಕೂ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಬಿಡುವುದಿಲ್ಲವೆಂದು ತಿಳಿಸಿದ್ದಾರೆ.
ಕೊಲೆ ಆರೋಪಿ ಸಂತೋಷ್‌ಕುಮಾರ್ ಬಂಧನ
ಕೋಲಾರ: ಕಳೆದ ಜುಲೈ ತಿಂಗಳ 10 ರಂದು ಕೋಲಾರ ನಗರದಲ್ಲಿ ಹೆಂಡತಿ ವೀಣಾ ಮತ್ತು ಮಗಳು ದೀಪ್ತಿಯ ಸಾವಿನ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಂತೋಷ್‌ಕುಮಾರ್‌ನನ್ನು ಕೋಲಾರ ಪೊಲೀಸರು ಪಾಂಡಿಚೇರಿಯಲ್ಲಿ ಬಂಧಿಸಲಾಗಿದೆ ಎಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ. ಸಂತೋಷ್‌ಕುಮಾರ್ ಬಂಧನಕ್ಕೆ ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಕಳೆದ ಒಂದು ತಿಂಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದರು. ಡಿಸಿ, ಎಸ್ಪಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನಕ್ಕಾಗಿ ಕಾರ್ಯತಂತ್ರ ರೂಪಿಸಿದ್ದರಲ್ಲದೆ, ಆರೋಪಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಚಿಂತನೆ ನಡೆಸಿದ್ದರು. ಆರೋಪಿಯು ಕಡೆಗೂ ಸಿಕ್ಕಿರುವುದರಿಂದ ಮೃತ ವೀಣಾ ಹಾಗೂ ದೀಪ್ತಿಯ ಕಡೆಯವರು ಮಾತ್ರವಲ್ಲದೆ, ಪ್ರತಿಭಟನಾಕಾರರು ಸಹ ಹರ್ಷ ವ್ಯಕ್ತಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಪಾಂಡಿಚೇರಿಯಿಂದ ಕೋಲಾರಕ್ಕೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
25ರಂದು ವಿಶೇಷ ಸೌಲಭ್ಯಕ್ಕೆ ಆಗ್ರಹಿಸಿ ಸಿಎಂ ಬಳಿ ನಿಯೋಗ
ದಾವಣಗೆರೆ: ಸಂವಿಧಾನದ ವಿಶೇಷ ಸ್ಥಾನಮಾನದ 371 ಜೆ ಕಲಂ ವ್ಯಾಪ್ತಿಗೆ ಹರಪನಹಳ್ಳಿ ತಾಲೂಕು ಸೇರ್ಪಡೆಗೆ ಒತ್ತಾಯಿಸಿ ನಗರದ ಡಿಸಿ ಕಚೇರಿ ಬಳಿ 3 ದಿನದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ನೀಲಗುಂದ ಗುಡ್ಡದ ವಿರಕ್ತ ಮಠದ ಚನ್ನಬಸವ ಶಿವಯೋಗಿಗಳು ಉತ್ತರ ಶಾಸಕ ಎಸ್ಸೆಸ್ ಮಲ್ಲಿಕಾರ್ಜುನ್‌ರ ಭರವಸೆ ಮೇರೆಗೆ ಬುಧವಾರ ಹೋರಾಟವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದ್ದಾರೆ. ಈ ಸಂಬಂಧ ಸೆ.25ರಂದು ಸಿಎಂ ಬಳಿ ನಿಯೋಗ ಹೋಗುವುದಾಗಿ ಶಾಸಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

