ಮೈಸೂರು

ಗ್ರಾಮೀಣ ದಸರಾ ಯಶಸ್ಸಿಗೆ ಮನವಿ

Published On :

ಪಿರಿಯಾಪಟ್ಟಣ: ಪಕ್ಷಬೇಧ ಮರೆತು ಗ್ರಾಮೀಣ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಗ್ರಾಮೀಣ ದಸರಾ ಸಮಿತಿ ಅಧ್ಯಕ್ಷ ಮಹದೇವ್ ಹೇಳಿದರು.
ಇಲ್ಲಿನ ತಾಲೂಕು ಆಡಳಿತ ಭವನದಲ್ಲಿ ಗ್ರಾಮೀಣ ದಸರಾ ಮಹೋತ್ಸವ ಆಚರಣೆಯ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ದಸರಾ ಆಚರಣೆಗೆ ಪ್ರತಿ ತಾಲೂಕಿಗೆ 4 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಗ್ರಾಮೀಣ ದಸರಾ ಆಚರಣೆಯು ಸರ್ಕಾರಿ ಕಾರ್ಯಕ್ರಮವಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳೂ ಜವಾಬ್ದಾರಿಯಿಂದ ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಬೇಕು. ಸ್ಥಳೀಯ ಕಲಾತಂಡಗಳಿಗೆ ಆದ್ಯತೆ ನೀಡುವ ದೃಷ್ಟಿಯಿಂದ ಆಯಾ ತಾಲೂಕುಗಳ ಸ್ಥಳೀಯ ಕಲಾವಿದರನ್ನು ಗುರುತಿಸಿ ಕಾರ್ಯಕ್ರಮ ರೂಪಿಸಬೇಕಾಗಿದೆ. ಈ ಬಗ್ಗೆ ಪಿಡಿಒಗಳು ಕಲಾತಂಡಗಳ ಪತ್ತೆ ಮಾಡಿ ಅವಕಾಶ ಕಲ್ಪಿಸಿಕೊಡುವ ಜವಾಬ್ದಾರಿ ನಿಭಾಯಿಸಬೇಕು ಎಂದು ತಿಳಿಸಿದರು.
ಶಾಸಕ ಕೆ. ವೆಂಕಟೇಶ್ ಮಾತನಾಡಿ, ಅ.4ರಿಂದ 14ರವರೆಗೆ ವಿಶ್ವವಿಖ್ಯಾತ ಮೈಸೂರು ದಸರಾ ನಡೆಯಲಿದ್ದು, ಸೆ.26ರಂದು ಗ್ರಾಮೀಣ ದಸರಾ ಆಚರಿಸುತ್ತಿರುವುದು ಅಷ್ಟೇನು ಮೆರಗು ನೀಡುವುದಿಲ್ಲ. ಮೈಸೂರು ದಸರಾದ ದಿನಾಂಕದ ಹತ್ತಿರದಲ್ಲಿ ಗ್ರಾಮೀಣ ದಸರಾ ನಡೆಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟರು.
ದಸರಾ ಕಾರ್ಯಕ್ರಮದ ಅಂಗವಾಗಿ ಇಲಾಖಾವಾರು ಸ್ತಬ್ದಚಿತ್ರಗಳನ್ನು ಮೆರವಣಿಗೆಯಲ್ಲಿ ಭಾಗವಹಿಸಲು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡಾ ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಿತು. ಜಿಪಂ ಸದಸ್ಯೆ ಮಂಜುಳಾರಾಜ್, ತಾಪಂ ಸದಸ್ಯೆ ಬಿ.ವಿ. ಅನಿತಾ, ತಹಸೀಲ್ದಾರ್ ಎಂ.ಕೆ. ಸವಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.