ಪಿರಿಯಾಪಟ್ಟಣದಲ್ಲಿ ದಸರಾ ಕ್ರೀಡಾಕೂಟ
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಸೆ. 23
ತಾಲೂಕು ಮಟ್ಟದಲ್ಲಿ ಜಯಗಳಿಸುವ ಕ್ರೀಡಾಪಟುಗಳು ಜಿಲ್ಲಾಮಟ್ಟದಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸಿ, ತಾಲೂಕಿಗೆ ಕೀರ್ತಿ ತರುವಂತೆ ತಹಸೀಲ್ದಾರ್ ಎಂ.ಕೆ. ಸವಿತಾ ಹೇಳಿದರು.
ಗೋಣಿಕೊಪ್ಪ ರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಸೋಮವಾರ ಆವರಣದಲ್ಲಿ ಏರ್ಪಡಿಸಿದ್ದ ಗ್ರಾಮೀಣ ದಸರಾ ಕ್ರೀಡಾಕೂಟಕ್ಕೆ ಬಾವುಟ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರ ಗ್ರಾಮೀಣ ದಸರಾ ಕ್ರೀಡಾಕೂಟ ಏರ್ಪಡಿಸಿ ಅವಕಾಶ ಕಲ್ಪಿಸಿಕೊಟ್ಟಿದ್ದು, ಗ್ರಾಮೀಣ ಪ್ರದೇಶದ ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಕ್ರೀಡಾಕೂಟದಲ್ಲಿ 40 ವರ್ಷಕ್ಕೆ ಮೇಲ್ಪಟ್ಟ ಹಾಗೂ 40 ವರ್ಷದೊಳಗಿನ ಪುರುಷ ಹಾಗೂ ಮಹಿಳೆಯರಿಗಾಗಿ ಎರಡು ಪ್ರತ್ಯೇಕ ವಿಭಾಗಗಳಲ್ಲಿ ಪುರುಷರಿಗೆ ಗೊಬ್ಬರದ ಮೂಟೆ ಹೊತ್ತು ಓಡುವ ಸ್ಪರ್ಧೆ, ಗುಂಡು ಎತ್ತುವ ಸ್ಪರ್ಧೆ, ಮೂರು ಕಾಲಿನ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ ಹಾಗೂ ಕೆಸರು ಗದ್ದೆ ಓಟದ ಸ್ಪರ್ಧೆಗಳನ್ನು ಮತ್ತು ಮಹಿಳೆಯರಿಗಾಗಿ ನೀರಿನ ಬಿಂದಿಗೆ ಹೊತ್ತು ಓಡುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ ಹಾಗೂ ಕೆಸರುಗದ್ದೆ ಓಟದ ಸ್ಪರ್ಧೆಗಳು ನಡೆಯಿತು.
ಚುನಾಯಿತ ಪ್ರತಿನಿಧಿಗಳಿಲ್ಲ: ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸ್ಪರ್ಧೆ ನಡೆಯುವ ಸಂದರ್ಭದಲ್ಲಿ ಯಾವುದೇ ಚುನಾಯಿತ ಜನಪ್ರತಿನಿಧಿಗಳು ಬಾರದಿದ್ದದ್ದು, ಸಾರ್ವಜನಿಕರ ಚರ್ಚೆಯ ವಿಷಯವಾಗಿತ್ತು. ಹಗ್ಗ ಜಗ್ಗಾಟ ಸ್ಪರ್ಧೆ ವೇಳೆ ತಾಪಂ ಸದಸ್ಯೆ ಬಿ.ವಿ. ಅನಿತಾ ಬಂದು ಹೋಗಿದ್ದು ಬಿಟ್ಟರೆ, ಯಾವುದೆ ಚುನಾಯಿತ ಪ್ರತಿನಿಧಿಗಳು ಬರಲಿಲ್ಲ. ಪ್ರಬಾರ ಇಒ ಮನೋಹರ್, ಎಡಿಎ ಕೆ. ರಾಜು, ಸರ್ಕಾರಿ ನೌಕರರ ಸಂಘದ ತಾ. ಅಧ್ಯಕ್ಷ ಎಂ.ಕೆ. ಪ್ರಕಾಶ್, ದೈಹಿಕ ಶಿಕ್ಷಕರ ಸಂಘದ ತಾ. ಅಧ್ಯಕ್ಷ ಮಹದೇವಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

