ಇಂದು ಕೆಲವೆಡೆ ವಿದ್ಯುತ್ ವ್ಯತ್ಯಯ
ಮೈಸೂರು: ತಾಲೂಕಿನ ಕೆಎಚ್ಬಿ ಮತ್ತು ಡಿಎಂಜಿ ಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕೆಲಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಸೆ.24ರ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಹೊಂದಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಪ್ರದೇಶಗಳು- ದೊಡ್ಡಮಾರಗೌಡನಹಳ್ಳಿ, ದೊಡ್ಡಹಟ್ಟಿಹುಂಡಿ, ಮರಯ್ಯನಹುಂಡಿ, ಕಟ್ಟೆಹುಂಡಿ, ಮಾದಹಳ್ಳಿ, ನುಗ್ಗಹಳ್ಳಿ, ಮಾಣಿಕ್ಯಪುರ, ಕಮರಹಳ್ಳಿ, ನವೋದಯ ಶಾಲೆ ಮತ್ತು ಸುತ್ತಮುತ್ತಲ ಪ್ರದೇಶ. ಕೆಎಚ್ಬಿ ಬಡಾವಣೆ ಪ್ರದೇಶ, ಹೂಟಗಳ್ಳಿ, ವಿಜಯನಗರ 4ನೇ ಹಂತ, ಕೆಎಂ ಹಳ್ಳಿ, ಬೀರಿಹುಂಡಿ, ಕುಮಾರಬೀಡು, ಬೆಳವಾಡಿ, ಬೆಳವಾಡಿ ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲ ಪ್ರದೇಶಗಳು.
ಅಲ್ಪಸಂಖ್ಯಾತ ಹೆಣ್ಣು ಮಕ್ಕಳಿಗೆ ಅನುದಾನ
ಮೈಸೂರು: ಪ್ರಸಕ್ತ ಸಾಲಿನಿಂದ ಅಲ್ಪಸಂಖ್ಯಾತರ ಮುಸ್ಲಿಂ ಹೆಣ್ಣು ಮಕ್ಕಳಿಗೆ, ವಿಚ್ಚೇದಿತ ಮಹಿಳೆ ಹಾಗೂ ವಿಧವೆಯರಿಗೆ ವೈಯಕ್ತಿಕ ಮತ್ತು ಸಾಮೂಹಿಕ ಮದುವೆ ಕಾರ್ಯಗಳಿಗೆ ವಿವಾಹ ಖರ್ಚು, ವೆಚ್ಚಗಳು, ಜೀವನಾವಶ್ಯಕ ಸಾಮಗ್ರಿಗಳನ್ನು ತೆಗೆದುಕೊಳ್ಳಲು ಸರ್ಕಾರ 50 ಸಾವಿರ ನೀಡುವ ಹೊಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು. ಸಂಪರ್ಕಿಸಬಹುದು. ದೂ. 0821- 2422088, ವೆಬ್ಸೈಟ್- www.gokdom.com ಇಮೇಲ್- gokdom.domyszgmail.com ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

