ಮೈಸೂರು

ಗಣೇಶ ಗಲಾಟೆಯಲ್ಲಿ ಇಬ್ಬರಿಗೆ ಇರಿತ

Published On :

ಮೈಸೂರು: ಗಣಪತಿ ಕೂರಿಸುವ ವಿಚಾರದಲ್ಲಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಇಬ್ಬರಿಗೆ ಇರಿದು ಕೊಲೆ ಯತ್ನ ನಡೆಸಿರುವ ಘಟನೆ ಗೋಕುಲಂ 2ನೇ ಹಂತದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಈ ಗಲಾಟೆಯಲ್ಲಿ ಗೋಕುಲಂ ನಿವಾಸಿಗಳಾದ ಶಿವಶಂಕರ್ ಮತ್ತು ಅವಿನಾಶ್ ಎಂಬವರು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಇಬ್ಬರನ್ನು ಇರಿದ ಆರೋಪದ ಮೇಲೆ ಮಂಜೇಶ್, ಪೃಥ್ವಿರಾಜ್ ಮತ್ತು ಕೀರ್ತಿ ಎಂಬವರನ್ನು ಪೊಲೀಸರು ಸೋಮವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ. ಗೋಕುಲಂನಲ್ಲಿ ಯುವಕರ ಗುಂಪೊಂದು ಸೇರಿಕೊಂಡು ಗಣಪತಿ ಕೂರಿಸಿದ್ದರು. ಈ ಕಾರ್ಯದಲ್ಲಿ ಮಂಜೇಶ್ ಮತ್ತು ಇತರರನ್ನು ಸೇರಿಸಿಕೊಳ್ಳದೆ ನಿರ್ಲಕ್ಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಜೇಶ್ ಮತ್ತು ಇತರೆ ಮೂವರು ಸೇರಿಕೊಂಡು ಗಲಾಟೆ ಮಾಡಿ, ಇಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಯಲ್ಲಿ ಗಲಾಟೆ: ಕಂಬಕ್ಕೆ ಕಟ್ಟಿ ಹಾಕಿದರು
ಮೈಸೂರು: ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಕಲ್ಲಿನಿಂದ ಹೊಡೆದು ಗಲಾಟೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿರುವ ಘಟನೆ ಟಿಪ್ಪು ವೃತ್ತದಲ್ಲಿ ಸೋಮವಾರ ನಡೆದಿದೆ. ಅಹಮದ್ ಜಾನ್ ಎಂಬಾತನು ಸಾರ್ವಜನಿಕರ ಮೇಲೆ ಕಲ್ಲು ತೂರುತ್ತಿದ್ದ. ಹೀಗಾಗಿ ಸಾರ್ವಜನಿಕರು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಈತನು ಮಾನಸಿಕ ಅಸ್ವಸ್ಥ ಇರಬಹುದು ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.