ಕ.ಪ್ರ.ವಾರ್ತೆ ಎಚ್.ಡಿ.ಕೋಟೆ ಸೆ. 24
ಕೆರೆಗಳು ನಮ್ಮ ಪೂರ್ವಜರು ನೀಡಿರುವ ಬಳುವಳಿಯಾಗಿದ್ದು, ಅವುಗಳ ಸಂರಕ್ಷಣೆ ಅತ್ಯವಶ್ಯಕವಾಗಿದೆ ಎಂದು ಸಂಸದ ಆರ್. ಧ್ರುವನಾರಾಯಣ ಹೇಳಿದರು.
ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಅತ್ಯವಶ್ಯಕ ಹಾಗೂ ಉಪಯುಕ್ತವಾದ ಕೆರೆಗಳನ್ನು ಕಡೆಗಣಿಸಬಾರದು. ಕೆರೆಗಳು ಇದ್ದರೆ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದರು.
ತಾಲೂಕಿನ ಕೆರೆಗಳಲ್ಲಿಯೇ ದೊಡ್ಡ ಕೆರೆಯಾದ ಹೆಬಳ್ಳ ಜಲಾಶಯದ ಸುತ್ತಲು ಒತ್ತುವರಿಯಾಗಿರುವ ಜಮೀನನ್ನು ತೆರವುಗೊಳಿಸಬೇಕು ಹಾಗೂ ಕೆರೆಯ ಹೂಳನ್ನು ತೆಗೆಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, ಕೆರೆಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದಲ್ಲದೆ, ಪ್ರತಿ ವರ್ಷವೂ ಸಭೆ ಕರೆದು ಚರ್ಚಿಸಿ ಕೆರೆಗಳ ಅಭಿವೃದ್ಧಿಯತ್ತ ಗಮನಹರಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿಯೇ ಎಚ್.ಡಿ. ಕೋಟೆ ತಾಲೂಕು ಉದ್ಯೋಗ ಖಾತರಿ ಯೋಜನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕೇಂದ್ರ ಸರ್ಕಾರದಿಂದ ಯೋಜನೆಗೆ ಹಣವು ಹೇರಳವಾಗಿ ಬರುತ್ತಿದ್ದು, ಬಂದ ಹಣವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಕಳೆದ ವರ್ಷ ರಾಜ್ಯದಲ್ಲಿ ಬರಗಾಲ ಉಂಟಾದ್ದರಿಂದ ಪ್ರತಿಯೊಂದು ಹಳ್ಳಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವುದರಿಂದ, ಶಾಶ್ವತ ಕುಡಿಯುವ ನೀರು ಒದಗಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಲ್ಲಿ ತಾಲೂಕಿನ 151 ಹಳ್ಳಿಗಳು ಆಯ್ಕೆಯಾಗಿದ್ದು, ತಾಲೂಕಿನ ಒಟ್ಟು 6 ಕಡೆಗಳಲ್ಲಿ ಶಾಶ್ವತ ಕುಡಿಯುವ ನೀರು ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನಮ್ಮ ಪಕ್ಕದ ರಾಜ್ಯ ತಮಿಳುನಾಡಿನಲ್ಲಿ ಕುಡಿಯುವ ನೀರಿಗಾಗಿ ಯೋಜನೆ ಸಿದ್ದಪಡಿಸಿ ಸಮರ್ಪಕವಾಗಿ ಅದರ ಪ್ರಯೋಜನ ಪಡೆದುಕೊಳ್ಳಲಾಗುತ್ತಿದೆ. ಆದ್ದರಿಂದ ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರತಿಯೊಂದು ಹಳ್ಳಿಗೂ ಶಾಶ್ವತ ಕುಡಿಯುವ ನೀರು ನೀಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕುಡಿವ ನೀರಿಗೆ ಕ್ರಮ: ಜಿಪಂ ವಿಭಾಗದ ಕೆ.ಆರ್.ನಗರದ ಇಇ ರಾಜು ತಾಲೂಕಿನಲ್ಲಿ 151 ಗ್ರಾಮಗಳಿಗೆ ಉತ್ತಮವಾದ ಶಾಶ್ವತ ಕುಡಿಯುವ ನೀರು ನೀಡುವ ಸಲುವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಲಿಂಗರಾಜು ತಾಲೂಕಿನಲ್ಲಿ ಕಳೆದ ಸಾಲಿನಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೈಗೊಂಡ ಕ್ರಮ ತಿಳಿಸಿದರು.
ಜಿಪಂ ಸದಸ್ಯರಾದ ಎಚ್.ಸಿ. ಮಂಜುನಾಥ್, ನಂದಿನಿ, ರಾಜಲಕ್ಷ್ಮಿ, ತಾಪಂ ಉಪಾಧ್ಯಕ್ಷ ಬಿ.ಜಿ. ಮಹೇಂದ್ರ, ತಹಸೀಲ್ದಾರ್ ಕೆ.ಕೃಷ್ಣ, ಕಾರ್ಯನಿರ್ವಾಹಣಾಧಿ
ಮಾನವೀಯ ಗುಣ ಮೈಗೂಡಿಸಿಕೊಳ್ಳಲು ಕರೆ
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಸೆ. 24
ಪ್ರತಿಯೊಬ್ಬ ಮನುಷ್ಯ ಮಾನವೀಯ ಗುಣಗಳನ್ನು ಜೀವನದಲ್ಲಿ ರೂಢಿಸಿಕೊಂಡು ಮುನ್ನಡೆದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಹೇಳಿದರು.
ಆದಿಚುಂಚನಗಿರಿ ಸಮುದಾಯದ ತಾಲೂಕು ಒಕ್ಕಲಿಗರ ಹಿತರಕ್ಷಣಾ ಸಮಿತಿ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಸಮಾಜದಲ್ಲಿ ಮನುಷ್ಯರಲ್ಲಿ ಮಾನವೀಯ ಗುಣಗಳು ಕಾಣೆಯಾಗುತ್ತಿವೆ. ಆಚಾರ ವಿಚಾರಗಳ ಬಗ್ಗೆ ಹಾಗೂ ಮಾನವೀಯ ಗುಣಗಳ ಬಗ್ಗೆ ಪ್ರತಿಯೊಬ್ಬರೂ ಅರಿತು ನಡೆಯಬೇಕಿದೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಕೆ. ಪ್ರಕಾಶ್ ಮಾತನಾಡಿ, ಹಲವಾರು ಪ್ರತಿಭೆಗಳು ಇಂದು ಅವಕಾಶ ವಂಚಿತರಾಗಿದ್ದು, ಅವರನ್ನು ಸಂಘ ಸಂಸ್ಥೆಗಳು ಗುರುತಿಸಿ ಅವರಲ್ಲಿನ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರಿಸಲು ವೇದಿಕೆ ಕಲ್ಪಿಸಿಕೊಡಬೇಕಿದೆ. ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸುತ್ತಿರುವ ಸಂಘದ ಕಾರ್ಯ ಶ್ಲಾಘನೀಯ ಎಂದರು.
ವಕೀಲರ ಸಂಘದ ತಾಲೂಕು ಅಧ್ಯಕ್ಷ ಬಿ.ವಿ. ಜವರೇಗೌಡ ಹಾಗೂ ಮೈಸೂರು ನಗರಪಾಲಿಕ ಸದಸ್ಯ ಪ್ರಶಾಂತ್‌ಗೌಡ ಮಾತನಾಡಿದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರಿಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಿತಿ ಅಧ್ಯಕ್ಷ ಗೋವಿಂದೇಗೌಡ, ಕಾರ್ಯದರ್ಶಿ ರಮೇಶ್ ಇದ್ದರು.
Advertisement