ಗ್ರಾಮೀಣ ದಸರೆ ಯಶಸ್ಸಿಗೆ ಶ್ರಮಿಸಲು ಮನವಿ
ಕ.ಪ್ರ.ವಾರ್ತೆ ಕೆ.ಆರ್. ನಗರ ಸೆ. 24
ಗ್ರಾಮೀಣ ದಸರಾ ಅದ್ಧೂರಿಯಾಗಿ ನಡೆಯಲು ಸಾರ್ವಜನಿಕರು ಮತ್ತು ಅಧಿಕಾರಿ ವರ್ಗದವರು ಪರಸ್ಪರ ಸಹಕಾರ ಮನೋಭಾವನೆಯಿಂದ ಕೆಲಸ ಮಾಡಬೇಕು ಎಂದು ಗ್ರಾಮೀಣ ದಸರಾ ಉಪ ಸಮಿತಿ ಅಧ್ಯಕ್ಷ ಕೋಟೆಹುಂಡಿ ಮಹದೇವು ಹೇಳಿದರು.
ತಾಪಂ ಸಭಾಂಗಣದಲ್ಲಿ ನಡೆದ ಗ್ರಾಮೀಣ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಮೀಣ ದಸರಾಕ್ಕೆ ಸರ್ಕಾರದಿಂದ 4 ಲಕ್ಷ ಅನುದಾನ ಬರಲಿದ್ದು, ಈಗಾಗಲೇ 1.25 ಲಕ್ಷ ಬಿಡುಗಡೆ ಮಾಡಲಾಗಿದೆ. ಕೂಡಲೇ ಅಧಿಕಾರಿಗಳು ಕಾರ್ಯೋನ್ಮುಖರಾಗಿ ದಸರಾ ಸಂಬಂಧಿತ ಪೂರ್ವ ಸಿದ್ಧತೆಗಳನ್ನು ಆರಂಭಿಸಿ, ಈ ಸಂಬಂಧ ತಮಗೆ ಸೂಕ್ತ ಮಾಹಿತಿ ಹಾಗೂ ವರದಿ ಸಲ್ಲಿಸಬೇಕೆಂದು ತಾಕೀತು ಮಾಡಿದರು.
ಅವಮಾನ ಮಾಡಿದ್ರೆ ಸಹಿಸಲ್ಲ: ಕಲಾ ತಂಡಗಳು, ಜಾನಪದ ಸಂಸ್ಕೃತಿ ಬಿಂಬಿಸುವ ಕಲಾ ಪ್ರಕಾರಗಳು ಹಾಗೂ ಇತರೆ ಹಳ್ಳಿಯ ಜಾನಪದ ಸೊಗಡಿನ ಪ್ರತಿಭೆಗಳಿಗೆ ಹೆಚ್ಚು ಆದ್ಯತೆ ನೀಡಬೇಕೆಂದು ಸೂಚಿಸಿದರು.
ದಸರಾ ಮೆರವಣೆಗೆಯಲ್ಲಿ ಭಾಗವಹಿಸಲು ಇಚ್ಛಿಸುವ ಎಲ್ಲ ಕಲಾ ತಂಡಗಳಿಗೂ ಕಡ್ಡಾಯವಾಗಿ ಅವಕಾಶ ಕಲ್ಪಿಸಿ, ಅವರಿಗೆ ಗೌರವಧನ ನೀಡಬೇಕು. ಈ ವಿಚಾರದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಜವಬ್ದಾರಿಯಿಂದ ಕೆಲಸ ನಿರ್ವಹಿಸಿ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ವರದಿ ಮಾಡಬೇಕೆಂದರಲ್ಲದೆ, ನಾಡ ಹಬ್ಬವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಲು ಸಹಕಾರ ನೀಡಿ ಎಂದು ಮನವಿ ಮಾಡಿದರು.
ಉಪಸಮಿತಿ ಸದಸ್ಯ ಶಿವಪ್ಪ, ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ. ಬಸವರಾಜು, ಉಪ-ತಹಸೀಲ್ದಾರ್ ಯದುಗಿರೀಶ್, ಸದಸ್ಯರಾದ, ಕೃಷ್ಣೇಗೌಡ, ರವಿ, ಸೀತಾರಾಮ್, ಸಾದಿಕ್‌ಖಾನ್, ಮುಖಂಡರಾದ ಪ್ರಭಾಕರ್ ಜೈನ್, ನಾಗರಾಜು, ಪ್ರಕಾಶ್, ಶೇಖರ್, ಸ್ವಾಮೇಗೌಡ, ತಾಲೂಕು ಅಧಿಕಾರಿಗಳ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

