ಮೈಸೂರು

ಸೇವಾ ಮನೋಭಾವದಿಂದ ಕೆಲಸ ಮಾಡಿದರೆ ಯಶಸ್ಸು

Published On :

ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಸೆ. 24
ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ಸಿಗುತ್ತದೆ ಎಂದು ತಾಪಂ ಸದಸ್ಯ ಅತ್ತರ್‌ಮತೀನ್ ಹೇಳಿದರು.
ತಾಲೂಕಿನ ಹಗಲಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಥಮ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ಸಂಘ ಸಂಸ್ಥೆಗಳಲ್ಲಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದಲ್ಲಿ ಸಂಘ ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯ ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಸಫೀರ್ ಅಹಮ್ಮದ್ ಮಾತನಾಡಿ, ಸಂಘ ಕಳೆದ ವರ್ಷ ಪ್ರಾರಂಭವಾಗಿದ್ದು, ಕೇವಲ 6 ತಿಂಗಳ ಅವಧಿಯಲ್ಲಿ 32 ಸಾವಿರ ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರು ಹೆಚ್ಚು ಹಾಲನ್ನು ಸರಬರಾಜು ಮಾಡುವ ಮೂಲಕ ಹಾಗೂ ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ಸಂಘದಲ್ಲಿ ಸದಸ್ಯತ್ವ ಪಡೆಯುವ ಮೂಲಕ ಸಂಘದ ಸೌಲಭ್ಯಗಳನ್ನು ಪಡೆಯುವುದರೊಂದಿಗೆ ಸಂಘದ ಬೆಳವಣಿಗೆಗೆ ಸಹಕರಿಸುವಂತೆ ಮನವಿ ಮಾಡಿದರು.
ವಿಸ್ತರಣಾಧಿಕಾರಿ ಬಿ.ಎ. ಕಾಳೇಗೌಡ ಸಹಕಾರ ಸಂಘದ ವತಿಯಿಂದ ದೊರೆಯಬಹುದಾದ ಸಾಲ ಸೌಲಭ್ಯ ಹಾಗೂ ಮತ್ತಿತರ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಶಫೀಕ್ ಅಹಮ್ಮದ್, ಅನ್ವರ್‌ಪಾಷಾ ಹಾಗೂ ಅಪ್ಪಣ್ಣೇಗೌಡ ಅವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಿ ಸನ್ಮಾನಿಸಲಾಯಿತು.
ಉಪ ವ್ಯವಸ್ಥಾಪಕ ಡಾ. ಸಣ್ಣತಮ್ಮೇಗೌಡ, ನಿರ್ದೇಶಕ ಸಗೀರ್ ಅಹಮ್ಮದ್, ಇಷ್ರತ್ ಶರೀಫ್, ಸಯಿದ್ ಅಹಮ್ಮದ್, ಅಸ್ಲಾಂಪಾಷ, ಅನ್ವರ್‌ಪಾಷ, ಇರ್ಫಾನ್ ಅಹ್ಮದ್, ಅಪ್ಪಾಣಿಗೌಡ, ಮೈಮುನಿಸಾ, ಶಘೀ ಅಹಮ್ಮದ್ ಜಾಮೀಯ ಮಸೀದಿ ಅಧ್ಯಕ್ಷ ಎಸ್ರೀಫ್ ಅಹಮ್ಮದ್, ಉಪಾಧ್ಯಕ್ಷ ಮಹಮ್ಮದ್ ಇಸ್ಮಾಯಿಲ್, ಸಂಘದ ಕಾರ್ಯದರ್ಶಿ ಸೈಯದ್ ಮುಜಾಹಿದ್, ಜಾಮಿಯ ಮಸೀದಿ ಅಧ್ಯಕ್ಷ ಎಸ್ರೀಫ್ ಅಹಮ್ಮದ್, ಉಪಾಧ್ಯಕ್ಷ ಮಹಮ್ಮದ್ ಇಸ್ಮಾಯಿಲ್, ಮುಖಂಡರಾದ ಫಯಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.