ಬೈಕ್- ಟಾಟಾ ಸುಮೋ ಡಿಕ್ಕಿ: ಇಬ್ಬರ ಸಾವು
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಸೆ. 26
ಬೈಕ್ ಹಾಗೂ ಟಾಟಾ ಸುಮೋ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಮೆಲ್ಲಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ತಾಲೂಕಿನ ಪಂಚವಳ್ಳಿ ಗ್ರಾಮದ ಕುಮಾರ್ (40) ಹಾಗೂ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ.
ಕುಮಾರ್ ತನ್ನ ಬೈಕ್ನಲ್ಲಿ ಪಟ್ಟಣದಿಂದ ಪಂಚವಳ್ಳಿಗೆ ಹೋಗುತ್ತಿದ್ದ ವೇಳೆ ಹುಣಸೂರು ಕಡೆಯಿಂದ ಬಂದ ಟಾಟಾ ಸುಮೋ ಮೆಲ್ಲಹಳ್ಳಿ ಗೇಟ್ಬಳಿಯ ಮುಸಲ್ಮಾನರ ಸ್ಮಶಾನದ ಬಳಿ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಟಾಟಾ ಸುಮೋ ಮತ್ತೆ ಚಲಿಸಿ ರಸ್ತೆ ಬದಿಯಲ್ಲಿ ಬರುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದ ನಂತರ ಸ್ಮಶಾನದ ಗೋಡೆಗೆ ಡಿಕ್ಕಿ ಹೊಡೆಯಿತು. ಅಪರಿಚಿತ ವ್ಯಕ್ತಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಟಾಟಾ ಸುಮೋ ಚಾಲಕ ಶ್ರೀನಿವಾಸ್ನನ್ನು ಬಂಧಿಸಿ, ವಾಹನವನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಾಸಕ ಕೆ. ವೆಂಕಟೇಶ್ ಭೇಟಿ: ಅಪಘಾತದಿಂದ ಮೃತಪಟ್ಟ ಕುಮಾರ ಹಾಗೂ ಅಪರಿಚಿತ ವ್ಯಕ್ತಿಯ ಶವವಿದ್ದ ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಕೆ.ವೆಂಕಟೇಶ್ ಕುಮಾರನ ಬಂಧುಗಳಿಗೆ ಸಾಂತ್ವನ ಹೇಳಿದರು.
ಅಕ್ರಮವಾಗಿ ಸಾಗಿಸುತ್ತಿದ್ದ ತಂಬಾಕು ಬೇಲ್ಗಳ ವಶ
ಪಿರಿಯಾಪಟ್ಟಣ: ಅಕ್ರಮವಾಗಿ ಸಾಗಿಸುತ್ತಿದ್ದ ತಂಬಾಕು ಬೇಲುಗಳನ್ನು ತಂಬಾಕು ಮಂಡಳಿಯ ವಿಚಕ್ಷಣ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಗಳಗನಕೆರೆ ಗ್ರಾಮದಿಂದ ಅತ್ತಿಗೋಡು ಗ್ರಾಮದ ಮಠದ ಕಡೆಗೆ ಟಾಟಾ ಎಸ್ ವಾಹನದಲ್ಲಿ ಮಹಾಲಿಂಗಪ್ಪ ಎಂಬವರು ಸುಮಾರು 80 ಸಾವಿರ ಮೌಲ್ಯದ 648 ಕೆಜಿಯ 7 ತಂಬಾಕು ಬೇಲುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ತಂಬಾಕು ಬೇಲುಗಳನ್ನು ವಶಕ್ಕೆ ತೆಗೆದುಕೊಂಡರು. ತಂಬಾಕು ಮಂಡಳಿಯ ಮೈಸೂರು ವಿಚಕ್ಷಣ ದಳದ ಅಧಿಕಾರಿಗಳಾದ ಎಸ್ಜಿಓ ಎಚ್.ಕೆ. ಮಹದೇವಯ್ಯ, ಪರಮೇಶ್ವರಪ್ಪ, ಚೆಲುವೇಗೌಡ, ಮಲ್ಲೇಶಪ್ಪ ದಾಳಿಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

