ಮೈಸೂರು

ಕೇಂದ್ರದ ಸುಗ್ರೀವಾಜ್ಞೆಗೆ ಅಂಕಿತ ಹಾಕದಂತೆ ಆಗ್ರಹ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಸೆ. 27
ಕಳಂಕಿತ ವ್ಯಕ್ತಿಗಳು ಹಾಗೂ ಗುರುತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಅಪರಾಧಿ ಜನಪ್ರತಿನಿಧಿಗಳು ಸಂಸತ್ತು ಅಥವಾ ವಿಧಾನಸಭೆ ಪ್ರವೇಶಿಸಬಾರದು ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಪರಿಗಣಿಸದೆ ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸಿದೆ.
ಈ ಸಂಬಂಧ ಸುಗ್ರಿವಾಜ್ಞೆಗೆ ಸಹಿ ಹಾಕದಂತೆ ರಾಷ್ಟ್ರಪತಿ ಅವರನ್ನು ಒತ್ತಾಯಿಸಲು ಸೆ.28ರ ಸಂಜೆ 5ಕ್ಕೆ ನಗರದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಸಹಿ ಸಂಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ. ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಚಳವಳಿಯನ್ನು ಯಶಸ್ವಿಗೊಳಿಸುವಂತೆ ಆಮ್ ಆದ್ಮಿ ಪಕ್ಷದ ಸಂಚಾಲಕ ಎಂ.ಎಸ್. ವಿನೋದ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಸಮಾಜದಲ್ಲಿ ಭ್ರಷ್ಟಾಚಾರ, ಕೊಲೆ, ಅತ್ಯಾಚಾರ, ದರೋಡೆಗಳಂತಹ ಹೀನಕೃತ್ಯಗಳಲ್ಲಿ ಭಾಗಿದಾರರಾಗಿರುವ ಜನಪ್ರತಿನಿಧಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದರೆ ಎಲ್ಲರೂ ತಲೆ ತಗ್ಗಿಸಬೇಕಾಗುತ್ತದೆ. ನ್ಯಾಯವನ್ನು ಎತ್ತಿ ಹಿಡಿಯಬೇಕಾದ ಇವರೇ ನ್ಯಾಯವನ್ನು ತಮ್ಮ ಇಷ್ಟಬಂದಂತೆ ತಿರುಗಿಸಿಕೊಂಡು ತಮಗೆ ಅನುಕೂಲವಾಗುತವ ಶಾಸನಗಳನ್ನು ಮಾಡಿಕೊಂಡು ಪೊಲೀಸರ ರಕ್ಷಣೆಯಲ್ಲಿಯೇ ಅತ್ಯಂತ ಸುರಕ್ಷಿತವಾಗಿದ್ದಾರೆ.
ಇದೆಲ್ಲವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಇದನ್ನು ಒಪ್ಪಿಕೊಳ್ಳದ ಈಗಿನ ಕೇಂದ್ರ ಯುಪಿಎ ಸರ್ಕಾರ ತನ್ನ ಇಷ್ಟಾನುಸಾರವಾಗಿ ನಡೆದು ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ಈ ಎಲ್ಲಾ ಘಟನಾವಳಿಗಳನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಮ್ಮ ನಿಲುವನ್ನು ರಾಜ್ಯದ ಜನರ ಮುಂದೆ ಸ್ಪಷ್ಪಡಿಸಬೇಕು. ಮೌನವೇ ಎಲ್ಲದಕ್ಕೂ ಸಮ್ಮತಿ ಎಂದು ಕೂರಬಾರದು ಎಂದು ಆಗ್ರಹಿಸಿದರು.
ಪದಾಧಿಕಾರಿಗಳಾದ ಗಗನ್, ಪದ್ಮಮ್ಮ, ನಂಜುಂಡರಾವ್, ಸಂಸ್ಕೃತಿ ಸುಬ್ರಹ್ಮಣ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.