ಮೈಸೂರು

'ಶಿಕ್ಷಣಕ್ಕೆ ವಿಶ್ವ ಬದಲಿಸುವ ಶಕ್ತಿ ಇದೆ'

Published On :

ಕ.ಪ್ರ.ವಾರ್ತೆ ,  ಮೈಸೂರು ,  ಸೆ. 27
ವಿಶ್ವವನ್ನು ಬದಲಿಸಲು ಶಿಕ್ಷಣ ಒಂದು ಶಕ್ತಿಯುತ ಸಾಧನ ಎಂದು ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ.ಜಿ. ತಳವಾರ್ ಹೇಳಿದರು.
ಎಸ್‌ಡಿಎಂ ಐಎಂಡಿ ಮತ್ತು ಟೆರೇಷಿಯನ್ ಕಾಲೇಜು ಸಂಯುಕ್ತವಾಗಿ ಆಯೋಜಿಸಿದ್ದ ಕಾಲೇಜು ಗ್ರಂಥಾಲಯದಲ್ಲಿ ಇ- ಸಂಪನ್ಮೂಲ ನಿರ್ವಹಣೆ ಮತ್ತು ಸೇವೆ ಕುರಿತ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಭಾರತ ಸರ್ಕಾರವು 11ನೇ ಪಂಚವಾರ್ಷಿಕ ಯೋಜನೆಯನ್ನು ಉನ್ನತ ಶಿಕ್ಷಣದ ಯೋಜನೆ ಎಂದು ಘೋಷಿಸಿದೆ. ಅಲ್ಲದೆ ಸಮಾನ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ನೀಡುತ್ತಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರೂ ಸಹ ಜ್ಞಾನವೆ ಎಲ್ಲಾ, ಜ್ಞಾನ ಎಲ್ಲರಿಗೂ ಎಂದಿದ್ದಾರ ಎಂದು ಹೇಳಿದರು.
ಐಎಸ್‌ಐಎಂನ ಕಾರ್ಯನಿರ್ವಾಹಕ ನಿರ್ದೇಶಕಿ ಪ್ರೊ.ಶಾಲಿನ ಅರಸ್ ಮುಖ್ಯ ಭಾಷಣ ಮಾಡಿದರು. ಎಸ್‌ಡಿಎಂ ಕಾಲೇಜಿನ ಮಾರುಕಟ್ಟೆ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಡಾ.ಎಚ್. ಗಾಯತ್ರಿ, ಟೆರೇಷಿಯನ್ ಕಾಲೇಜು ಪ್ರಾಂಶುಪಾಲ ಪ್ರೊ.ವಿ.ಕೆ. ಜೋಷ್, ಪ್ರೊ.ಹರಿನಾರಾಯಣ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.