ಮೈಸೂರು

ಮೌಢ್ಯ ತೊಲಗಿಸಲು ಶಿಕ್ಷಣ ಅಗತ್ಯ

Published On :

ಕ.ಪ್ರ.ವಾರ್ತೆ ನಂಜನಗೂಡು ಸೆ. 28
ಇಡೀ ಸಮಾಜ ಪರಿವರ್ತನೆಗೆ ಮೌಢ್ಯ ತೊಲಗಿಸಲು ಮಾನವೀಯ ತಳಹದಿಯ ಚಿಂತನೆ ಮಾಡುವ ಶಕ್ತಿ ಶಿಕ್ಷಣಕ್ಕಿದೆ ಎಂದು ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದರು.
ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿರುವ ಕಲಾಮಂದಿರದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶನಿವಾರ ಗುರುವಂದನೆ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಸರ್ಕಾರದಿಂದ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅಲ್ಲದೆ, ಸರ್ವ ಶಿಕ್ಷಣ ಅಭಿಯಾನದಿಂದ ಶಾಲೆಯ ಮೂಲ ಸೌಕರ್ಯಕ್ಕಾಗಿ ಹೆಚ್ಚಿನ ಅನುದಾನ ನೀಡುತ್ತಿದ್ದು, ಶಿಕ್ಷಕರಿಗೂ ಹೆಚ್ಚಿನ ಸಂಬಳ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಇದನ್ನು ಪಡೆಯಲು ಶಿಕ್ಷಕರಿಗೆ ಎಷ್ಟು ಹಕ್ಕು ಇದಿಯೋ, ಅದೇ ರೀತಿ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಪ್ರಜೆಯನ್ನಾಗಿ ಮಾಡುವ ಗುರುತ್ತರ ಜವಾಬ್ದಾರಿ ಇದೆ. ಅದನ್ನು ಅರಿತು ಮಕ್ಕಳು ಶಾಲೆಗೆ ಬರಲು ಆಸಕ್ತಿಯಾಗುವಂಥ ಶಿಕ್ಷಣ ನೀಡವಂತೆ ಅವರು ಕಿವಿಮಾತು ಹೇಳಿದರು.
ಶೀಘ್ರದಲ್ಲೇ ಪರಿಹಾರ: ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಕಲ್ಪಿಸುತ್ತಿರುವ ಮಧ್ಯಾಹ್ನದ ಬಿಸಿಯೂಟದ ಜವಾಬ್ದಾರಿಯನ್ನು ಶಿಕ್ಷಕರ ಹೆಗಲಿಗೆ ಹಾಕಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದನ್ನು ಶಾಶ್ವತವಾಗಿ ಬೇರೆ ಇಲಾಖೆಗೆ ವರ್ಗಾಯಿಸಲು ಸರ್ಕಾರದ ಮಟ್ಟದಲ್ಲಿ ಇದರ ಸಾಧಕ- ಬಾಧಕದ ಬಗ್ಗೆ ಹೀಗಾಗಲೆ ಸಂಬಂಧಪಟ್ಟ ಸಚಿವರು ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇನೆ. ಶೀಘ್ರದಲ್ಲೆ ಇದಕ್ಕೆ ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು.
ನಾಗಮ್ಮ ಶಾಲೆ ಆವರಣದಲ್ಲಿರುವ ಗ್ರಂಥಾಲಯ ಹಾಗೂ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಶೀಘ್ರದಲ್ಲೆ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಿಸಲು ಚಿಂತನೆ ನಡೆದಿದೆ. ತಕ್ಷಣದಲ್ಲೆ ಭೂಮಿ ಪೂಜೆ ನೆರವೇರಲಿದೆ ಎಂದು ಹೇಳಿದರು.
ಸನ್ಮಾನ: ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಗುರುಭವನದ ಸ್ಥಿತಿ ಶೋಚನೀಯವಾಗಿದೆ. ನವೀಕರಣಕ್ಕೆ ಶಾಸಕರಿಂದ 5 ಲಕ್ಷ, ಸಂಸದರ ನಿಧಿಯಿಂದ 5 ಲಕ್ಷ ಬಿಡುಗಡೆ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯಿಂದ 10 ಲಕ್ಷ ನೀಡುವುದರಿಂದ ಎಲ್ಲ ಸೌಲಭ್ಯವುಳ್ಳ ಗುರುಭವನ ನಿರ್ಮಾಣವು ಮುಂದಿನ ದಿನಗಳಲ್ಲಿ ನಿರ್ಮಾಣವಾಗಲಿದೆ ಎಂದು  ಅವರು ತಿಳಿಸಿದರು.
ಇದೇ ವೇಳೆ ನಿವೃತ್ತ ಶಿಕ್ಷಕರಿಗೆ, ತಾಲೂಕಿನ ಉತ್ತಮ ಶಿಕ್ಷಕರಿಗೆ, ಉತ್ತಮ ಶಾಲೆಗಳಿಗೆ ಹಾಗೂ ಸಾಂಸ್ಕೃತಿಕ ಕ್ರೀಡೆಯಲ್ಲಿ ವಿಜೇತರಾದ ಶಿಕ್ಷಕರನ್ನು ಸಚಿವರು ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿದರು. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಚೆಸ್ ಪಂದ್ಯಾವಳೆಯಲ್ಲಿ ಭಾಗವಹಿಸಿ ವಿಜೇತರಾದ ಕಳಲೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾದ ಸುಮತಿ, ಅರುಣ, ಚಾಂದಿನಿ, ಹಾಗೂ ಯೋಗ ಪಟು ಪ್ರವೀಣ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಜಿಪಂ ಸದಸ್ಯ ಕೆ. ಮಾರುತಿ, ತಾಪಂ ಅಧ್ಯಕ್ಷ ಎಸ್.ಎಂ. ಮಲ್ಲಿಕಾರ್ಜುನ ಸ್ವಾಮಿ, ಉಪಾಧ್ಯಕ್ಷೆ ಡಿ. ಚಿಕ್ಕೀರಮ್ಮ, ಶಿಕ್ಷಣಾಧಿಕಾರಿ ಪುರುಷೋತ್ತಮ್, ತಹಸೀಲ್ದಾರ್ ಅರುಳ್‌ಕುಮಾರ್, ತಾಪಂ ಇಒ ಡಾ. ಕೃಷ್ಣಂರಾಜು, ತಾಪಂ ಸದಸ್ಯರಾದ ಕಡುಬೂರು ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ, ಶಿಕ್ಷಕರ ಸಂಘದ ಅಧ್ಯಕ್ಷ ಮುದ್ದುಮಾದೇಗೌಡ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಿ. ನಾಗಶೇಯನ, ಉಪಾಧ್ಯಕ್ಷ ಧರ್ಮ ರತ್ನಾಕರ, ಶಿಕ್ಷಕರ ಸಂಘದ ಕಾರ್ಯದರ್ಶಿ ಎಸ್. ಶಿವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಜೆ.ಎಂ. ಮಲ್ಲೇಶ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.