ಮೈಸೂರು

ಎನ್‌ಟಿಎಂಎಸ್ ಉಳಿಸಲು ಹೋರಾಟ

Published On :

ಕ.ಪ್ರ.ವಾರ್ತೆ ಮೈಸೂರು ಸೆ. 28
ಸರ್ಕಾರ ಎನ್‌ಟಿಎಂಎಸ್ ಶಾಲೆ ಉಳಿಸಲು ಮುಂದಾಗದಿದ್ದರೆ ಹೋರಾಟ ಅನಿವಾರ್ಯ ಎಂದು ವಿವಿಧ ಸಂಘಟನೆಗಳು ಎಚ್ಚರಿಕೆ ನೀಡಿವೆ.
ರಾಮಕೃಷ್ಣ ಮಠಕ್ಕೆ ಈ ಶಾಲೆ ಜಾಗವನ್ನು ಹಸ್ತಾಂತರಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಕನ್ನಡ ಕ್ರಿಯಾ ಸಮಿತಿ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರು, ಈ ಸಂಬಂಧ ನ್ಯಾಯಾಂಗದ ಅಭಿಪ್ರಾಯ ಕೇಳಲಾಗುವುದು ಎಂದು ತಿಳಿಸಿದ ಕಾರಣ ರಿಟ್ ವಾಪಸ್ ಪಡೆಯಲಾಯಿತು ಎಂದು ಸಮಿತಿ ಕಾರ್ಯದರ್ಶಿ ಸಂಸ್ಕೃತಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.
ಇದೀಗ ನ್ಯಾಯವಾದಿ ಹೊಯ್ಸಳ ಎಂಬವರು ಸಲ್ಲಿಸಿರುವ ರಿಟ್ ಅರ್ಜಿಯನ್ನು ತಾಂತ್ರಿಕ ಕಾರಣಗಳಿಂದ ಹೈಕೋರ್ಟ್ ತಿರಸ್ಕರಿಸಿದ್ದು, ಈ ಶಾಲೆ ಉಳಿಸಲು ಸರ್ಕಾರ ಅಗತ್ಯ ಕ್ರಮ ವಹಿಸಿದೆ ಹೋದರೆ ಮತ್ತೆ ಕಾನೂನು ಮೊರೆ ಹೋಗಬೇಕಾಗುತ್ತದೆ ಎಂದು ಸಮಿತಿ ಸಂಚಾಲಕ ಸ.ರ. ಸುದರ್ಶನ ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರು ಎನ್‌ಟಿಎಂಎಸ್ ಶಾಲೆ ಉಳಿಸಲು ನೀಡಿದ್ದ ಭರವಸೆ ಈವರೆಗೆ ಈಡೇರಿಲ್ಲ.
ಇನ್ನಾದರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಿರಂತರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಹಾಗೂ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ತಿಳಿಸಿದ್ದಾರೆ.
ಅಂತಿಮ ವರದಿಯಲ್ಲೂ ಅದೇ ಅಭಿಪ್ರಾಯ: ಮೈಸೂರು ನಗರದ ಮಹಾರಾಣಿ ಎನ್‌ಟಿಎಂ ಶಾಲೆಯ ಸ್ಥಿತಿಗತಿ ಕುರಿತು ಬಾಲನ್ಯಾಯ ಮಂಡಳಿಯು ಅಂತಿಮ ವರದಿ ಸಲ್ಲಿಸಿದೆ. ಸದಸ್ಯ ಪಿ.ಪಿ. ಬಾಬುರಾಜ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್. ಸೋಮಲತಾ ನೀಡಿರುವ ವರದಿಯಲ್ಲಿ ಮಧ್ಯಂತರ ವರದಿಯಲ್ಲಿರುವ ಅಂಶಗಳನ್ನೇ ಹೇಳಲಾಗಿದೆ. ಶಾಲೆಯನ್ನು ಮುಚ್ಚುವ ನಿರ್ಧಾರ ರದ್ದುಪಡಿಸಬೇಕು. ಈ ಸಂಬಂಧ ಜಿಪಂ ಕೈಗೊಂಡಿರುವ ನಿರ್ಣಯನ್ನು ಗೌರವಿಸಬೇಕು ಎಂಬುದು ಪ್ರಮಖ ಅಂಶ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.