ಮೈಸೂರು

ಮಹಾರಾಜ ಕಾಲೇಜು ಅಭಿವೃದ್ಧಿಗೆ ಆದ್ಯತೆ

Published On :

ಕ.ಪ್ರ.ವಾರ್ತೆ ಮೈಸೂರು ಸೆ. 28
ಪ್ರತಿಷ್ಠಿತ ಮಹಾರಾಜ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಹೇಳಿದರು.
ಮೈಸೂರು ವಿವಿಯ ಸಂಜೆ ಕಾಲೇಜು ಜೂನಿಯರ್ ಬಿ.ಎ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಇತಿಹಾಸ ಸ್ನಾತಕೋತ್ತರ ವಿಭಾಗ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಧ್ಯಾಪಕರನ್ನು ನೇಮಕ ಮಾಡಲಾಗುವುದು. ಹಾಗೂ ಅವರಿಗೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಹಾಗೇಯೇ ಮಹಾರಾಜ ಕಾಲೇಜು ಕಟ್ಟಡದ ಪಾರಂಪರಿಕತೆಗೆ ಯಾವ ಧಕ್ಕೆಯೂ ಆಗದಂತೆ ನೋಡಿಕೊಂಡು ಈ ಆವರಣವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು.
ಆರ್ಥಿಕವಾಗಿ ಅನುಕೂಲವಿಲ್ಲದ ಬಡ ವಿದ್ಯಾರ್ಥಿಗಳಿಗೆ ಕೂಡ ದುಡಿಮೆ ಮಾಡಿಕೊಂಡಾದರೂ ಉನ್ನತ ಶಿಕ್ಷಣ ಪಡೆಯಬೇಕೆಂಬ ಆಶಯದೊಂದಿಗೆ ಸಂಜೆ ಕಾಲೇಜು ತರೆಯಲಾಯಿತು. ಇದೀಗ 48 ವರ್ಷಗಳನ್ನು ಪೂರೈಸುತ್ತಿರುವ ಈ ಸಂಜೆ ಕಾಲೇಜು ಸುವರ್ಣ ಸಂಭ್ರಮದತ್ತ ಸಾಗಿದೆ. ಈ ಸಂದರ್ಭದಲ್ಲಿ ಇನ್ನು ಹಲವು ವಿಷಯಗಳ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಸಿ.ಎಸ್. ರಾಮನಾರಾಯಣನ್, ಶಿಸ್ತು, ಸಮಯಪ್ರಜ್ಞೆ ಹಾಗೂ ಅಧ್ಯಯನಶೀಲತೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶ ಸಿಗಲಿವೆ. ಶ್ರಮವಿಲ್ಲದೆ ಏನ್ನನ್ನೂ ಸಾಧಿಸಲಾಗದು ಎಂದರು.
ಮಾನಸಗಂಗೋತ್ರಿ ಇತಿಹಾಸ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ಅಶ್ವಥ್‌ನಾರಾಯಣ, ಕಾಲೇಜಿನ ಇತಿಹಾಸ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ಟಿ. ಕೃಷ್ಣೇಗೌಡ ಇದ್ದರು. ವಿಭಾಗದ ಸಂಯೋಜನಾಧಿಕಾರಿ ಡಾ.ಎಸ್. ಆಂಜನೇಯ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಸಿ.ಡಿ. ಪರಶುರಾಮ ನಿರೂಪಿಸಿದರು. ಡಾ. ಆರ್.ಡಿ. ಪವಮಾನ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.