ಮೈಸೂರು

ವಚನ ವಿಸ್ಮಯ ಕೃತಿ ಬಿಡುಗಡೆ ನಾಳೆ

Published On :

ಮೈಸೂರು: ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಬಳಗದ ಸಂಯುಕ್ತಾಶ್ರಯದಲ್ಲಿ ಏ.3ರ ಸಂಜೆ 5.30ಕ್ಕೆ ಜೆಎಲ್‌ಬಿ ರಸ್ತೆಯ ಎಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ರಂಗನಾಥ್ ಮೈಸೂರು ಅವರ ವಚನ ವಿಸ್ಮಯ ಕೃತಿ ಲೋಕಾರ್ಪಣೆಯಾಗಲಿದೆ. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಜಯನಗರದ ಯೋಗಾನರಸಿಂಹಸ್ವಾವು ದೇವಾಲಯದ ಸಂಸ್ಥಾಪಕ ಡಾ.ಭಾಷ್ಯಂ ಸ್ವಾಮಿ ಉದ್ಘಾಟಿಸುವರು. ಪ್ರೊ.ಮಲೆಯೂರು ಗುರುಸ್ವಾಮಿ ಕೃತಿ ಬಿಡುಗಡೆ ಮಾಡುವರು. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ.ನೀಲಗಿರಿ ಎಂ. ತಳವಾರ್ ಮಾತನಾಡುವರು. ನಂತರ ನಡೆಯುವ ಆಧುನಿಕ ವಚನಕಾರರ ವಚನಗೋಷ್ಠಿಯಲ್ಲಿ ಮೇಲುಕೋಟೆ ವಂಗೀಪುರ ನಂಬೀಮಠದ ಇಳೈ ಆಳ್ವಾರ್ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್ಲೇಗೌಡ ಬೆಸಗರಹಳ್ಳಿ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಅಧ್ಯಕ್ಷ ಡಾ.ಟಿ. ಅನಂತಪದ್ಮನಾಭ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.


ಕೆಲಸಕ್ಕೆ ಹೋದ ವ್ಯಕ್ತಿ ನಾಪತ್ತೆ
ಮೈಸೂರು: ವಿದ್ಯಾರಣ್ಯಪುರಂ ಠಾಣೆ ವ್ಯಾಪ್ತಿಯ ನಿವಾಸಿ ನಾಗರಾಜಪ್ಪ ಎಂಬವರ ಪುತ್ರ ಪ್ರಭುಶಂಕರ್ (29) ಕೆಲಸಕ್ಕೆ ಹೋದವರು ನಾಪತ್ತೆಯಾಗಿದ್ದಾರೆ. ನಾನು ಮತ್ತು ಪ್ರಭುಶಂಕರ್ 8 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಫೆ.1 ರಂದು ಕೆಲಸಕ್ಕೆ ಹೋದವರು ವಾಪಸ್ ಬಂದಿಲ್ಲ ಎಂದು ಪ್ರಭುಶಂಕರ್ ಪತ್ನಿ ಲತಾ ಪೊಲೀಸರಿಗೆ ದೂರು ನೀಡಿದ್ದಾರೆ. ಚಹರೆ- 5.6 ಅಡಿ ಎತ್ತರ, ಕೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ಎಡತೋಳಿನಲ್ಲಿ ಲತಾ ಹಾಗೂ ಜಿಪಿ ಎಂಬ ಹಚ್ಚೆ ಇದೆ. ಕನ್ನಡ ಮತ್ತು ತಮಿಳು ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.0821- 2418322, 522 ಸಂಪರ್ಕಿಸಲು ವಿದ್ಯಾರಣ್ಯಪುರಂ ಠಾಣೆಯ ಎಸ್‌ಐ ಬಿ. ಓಂಪ್ರಕಾಶ್‌ಗೌಡ ಕೋರಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.