ಮೈಸೂರು

ವಿಶ್ವನಾಥರ ಕೊಡುಗೆ ಶೂನ್ಯ: ಆರೋಪ

Published On :

ಮೈಸೂರು: ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಾಲಿ ಸಂಸದ ಎಚ್.ವಿಶ್ವನಾಥ್ ಅವರ ಕೊಡುಗೆ ಕ್ಷೇತ್ರಕ್ಕೆ ಶೂನ್ಯ ಎಂದು ಮೈಸೂರು- ಕೊಡುಗು ಲೋಕಸಭಾ ಕ್ಷೇತ್ರದ ಡೆಮಾಕ್ರಟಿಕ್ ಪ್ರಜಾಕ್ರಾಂತಿ ಪಕ್ಷದ ಅಭ್ಯರ್ಥಿ ಹುಣಸೂರು ಕೆ. ಚಂದ್ರಶೇಖರ್ ಆರೋಪಿಸಿದರು. ಕಾಂಗ್ರೆಸ್ ಅಭ್ಯರ್ಥಿ ಎಚ್. ವಿಶ್ವನಾಥ್‌ಗೆ ಬುದ್ಧಿಯಿಲ್ಲ. ಅವರಿಂದ ಕ್ಷೇತ್ರಕ್ಕೆ ಏನೂ ಕೊಡುಗೆ ಆಗಿಲ್ಲ. ಕೇವಲ ಕಥೆ, ಕವಿತೆ ಬರೆದುಕೊಂಡೆ ಕಾಲ ಕಳೆಯುತ್ತಿರುವುದರಿಂದ ಅವರನ್ನು ಈ ಬಾರಿ ಜನರು ತಿರಸ್ಕರಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಶ್ವನಾಥ್ ಅವರಿಗೆ ಯಾವುದೇ ವೈಯಕ್ತಿಕ ವರ್ಚಸ್ಸಿಲ್ಲ. ಕೇವಲ ಸಿದ್ದರಾಮಯ್ಯ ಕೃಪಕಟಾಕ್ಷದಿಂದ ಕಳೆದ ಬಾರಿ ಗೆದ್ದಿದ್ದಾರೆ ಎಂದು ಆರೋಪಿಸಿದರು.


ಜೆಡಿಎಸ್, ಕಾಂಗ್ರೆಸ್‌ಗೆ ನೇಮಕ
ಮೈಸೂರು: ಜೆಡಿಎಸ್ ಹಿಂದುಳಿದ ವರ್ಗಗಳ ವಿಭಾಗದ 28ನೇ ವಾರ್ಡ್ ಅಧ್ಯಕ್ಷರಾಗಿ ಕುಂಬಾರಕೊಪ್ಪಲಿನ ಪುಟ್ಟಸ್ವಾಮಾಚಾರ್ ಹಾಗೂ ಕಾಂಗ್ರೆಸ್ ಸಮಿತಿಯ ಪ.ಜಾತಿ ವಿಭಾಗದ ಸಂಚಾಲಕರನ್ನಾಗಿ ಕುವೆಂಪುನಗರದ ಸಿ. ಹರೀಶ್ ಅವರನ್ನು ನೇಮಕ ಮಾಡಲಾಗಿದೆ.


ಕಾಂಗ್ರೆಸ್ ಬೆಂಬಲಿಸಲು ಮನವಿ
ಮೈಸೂರು: ವರುಣ ವಿಧಾನಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಚಾಮರಾಜನಗರ ಲೋಕಸಭಾ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಶಕ್ತಿ ತುಂಬುವಂತೆ ಕಾಂಗ್ರೆಸ್ ಮುಖಂಡ ವರುಣ ಮಹೇಶ್ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ವರುಣ ಕ್ಷೇತ್ರವನ್ನು ಮಾದರಿಯಾಗಿ ಮಾಡಲು ಆರ್. ಧ್ರುವನಾರಾಯಣ್ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಕೋರಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.