ಪ್ರವಾಸೋದ್ಯಮ ಅಭಿವೃದ್ಧಿ ಅವಶ್ಯ
ಮೈಸೂರು: ನಾಡಿನ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿಪಡಿಸಬೇಕು ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಮಹಾಜನ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ವಿಭಾಗ ಹಾಗೂ ಮಹಾಜನ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸಂಸ್ಥೆ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಕೆ.ಎಸ್. ನಾಗಪತಿ ರಚಿಸಿರುವ ಕರ್ನಾಟಕ ಎ ಡಿಲೈಟ್ ಫಾರ್ ಟೂರಿಸ್ಟ್ ಎಂಬ ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಕರ್ನಾಟಕದ ಚರಿತ್ರೆ ಹಾಗೂ ಪರಂಪರೆಗೆ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದೆ. ನಾಡಿನಲ್ಲಿ ಅನೇಕ ಸ್ಮಾರಕಗಳನ್ನು ಕಾಣಬಹುದಾಗಿದೆ. ಆದರೆ ಅವುಗಳನ್ನು ಸರಿಯಾಗಿ ಬಿಂಬಿಸಿ ವಿಶ್ವ ಮಟ್ಟದಲ್ಲಿ ಪ್ರವಾಸಿಗರನ್ನು ಸೆಳೆಯುವ ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದು ತಿಳಿಸಿದರು.
ಅಮೆರಿಕ ಹಾಗೂ ಕ್ಯಾಲಿಫೋರ್ನಿಯಾ ಮುಂತಾದ ದೇಶಗಳಲ್ಲಿ ಯಾವುದೋ ಕಲ್ಲುಗಳನ್ನು ಮತ್ತು ಹಳೆಯ ಮನೆಗಳನ್ನು ಪ್ರವಾಸಿ ತಾಣಗಳೆಂದು ಬಿಂಬಿಸಿ ಪ್ರವೇಶ ಸಂಗ್ರಹಿಸುವ ಕೆಲಸ ನಡೆದಿದೆ. ಆದರೆ ನಮ್ಮಲ್ಲಿ ಸುಂದರ ಹಾಗೂ ಮಹತ್ವದ ತಾಣಗಳಿದ್ದರೂ ಅವುಗಳನ್ನು ಜಾಗತಿಕವಾಗಿ ಬಿಂಬಿಸುವಲ್ಲಿ ಹಿಂದುಳಿದಿದ್ದೇವೆ ಎಂದರು.
ಕೃತಿ ಕುರಿತು ಮೈಸೂರು ವಿವಿಯ ಸಿಪಿಡಿಪಿಎಸ್ ನಿರ್ದೇಶಕ ಡಾ.ನಿರಂಜನ ವಾನಳ್ಳಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನೂತನ ಸಭಾಂಗಣ ಮತ್ತು ಜೀವ ವಿಜ್ಞಾನ ಪ್ರಯೋಗಾಲಯವನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು.
ಮಹಾಜನ ವಿದ್ಯಾಸಂಸ್ಥೆ ಅಧ್ಯಕ್ಷ ಆರ್.ವಾಸುದೇವ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಡಾ. ವಿಜಯಲಕ್ಷ್ಮೀ ಭಾಗವತ್, ಮಹಾಜನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ವಿ. ಪ್ರಭಾಕರ, ಮಹಾಜನ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಸಿ.ಕೆ. ರೇಣುಕಾರ್ಯ ಹಾಗೂ ಲೇಖಕ, ಮಹಾಜನ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಪ್ರೊ.ಕೆ.ಎಸ್. ನಾಗಪತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

