ಮೈಸೂರು

ಭಿನ್ನಮತ ಓಡ್ಸಿ, ಪುಟ್ಟರಾಜು ಗೆಲ್ಸಿ

Published On :

ಕೆ.ಆರ್. ನಗರ: ಕಾರ್ಯಕರ್ತರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಅವರಿಗೆ ತಾಲೂಕಿನಲ್ಲಿ ಹೆಚ್ಚು ಮತಗಳು ಬರುವಂತೆ ಕೆಲಸ ಮಾಡಬೇಕೆಂದು ಶಾಸಕ ಸಾ.ರಾ. ಮಹೇಶ್ ಮನವಿ ಮಾಡಿದರು.
ತಾಲೂಕಿನ ಹೆಬ್ಬಾಳು ಗ್ರಾಮದ ಲಕ್ಷ್ಮಮ್ಮ ಕೋಟೇಗೌಡ ಸಮುದಾಯ ಭವನದಲ್ಲಿ ನಡೆದ ಹೋಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದೆ. ಆದರೆ ಚುನಾವಣೆ ವೇಳೆ ಎಲ್ಲರೂ ಒಟ್ಟಾಗಿ ದುಡಿದು ಪಕ್ಷದ ಏಳಿಗೆಗೆ ದುಡಿಯಬೇಕೆಂದು ಕರೆ ನೀಡಿದರು.
ತಾಲೂಕಿನಾದ್ಯಂತ ಹೋಬಳಿ ಮಟ್ಟದ ಸಭೆಯನ್ನು ಮಾಡುತ್ತಿದ್ದು, ನಂತರ ಪಕ್ಷದ ಅಭ್ಯರ್ಥಿ ಪುಟ್ಟರಾಜು ಪರ ಮತಯಾಚಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತಿತರ ನಾಯಕರು ಆಗಮಿಸಲಿದ್ದು, ಈ ಬಾರಿ ದೇಶದಲ್ಲಿ ತೃತೀಯರಂಗ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು ಭವಿಷ್ಯ ನುಡಿದರು.
ತಾಲೂಕಿನ ಜನತೆ ನನ್ನನ್ನು ಎರಡನೇ ಅವಧಿಗೆ ಶಾಸಕನನ್ನಾಗಿ ಬಹುಮತದಿಂದ ಆಯ್ಕೆ ಮಾಡಿದ್ದು, ಕ್ಷೇತ್ರದ ಮತದಾರರ ಋಣ ತೀರಿಸದೆ ನಾನೇಕೆ ಬೇರೆ ಕ್ಷೇತ್ರಕ್ಕೆ ಹೋಗಲಿ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿ ಇರದೆ ಇರುವುದರಿಂದ ಕಾರ್ಯಕರ್ತರಿಗೆ, ಮುಖಂಡರಿಗೆ ಸಹಾಯ ಮಾಡಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ನಂಬಿದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆ. ಪ್ರತಿಯೊಬ್ಬ ಕಾರ್ಯಕರ್ತನು ತಮ್ಮ ಗ್ರಾಮಗಳಲ್ಲಿ ಮತದಾರರ ಮನವೊಲಿಸಿ ಪಕ್ಷದ ಪರ ಪ್ರಚಾರ ಮಾಡಿ ಎಂದು ತಿಳಿಸಿದರು.
ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಕೆ.ಎಸ್. ರೇವಣ್ಣ, ವಕ್ತಾರ ಕೆ.ಎಲ್. ರಮೇಶ್, ಯುವ ಘಟಕದ ಅಧ್ಯಕ್ಷ ಸುಜಯ್, ಗ್ರಾಪಂ ಅಧ್ಯಕ್ಷೆ ಲತಾ ಶಾಂತಕುಮಾರ್, ಉಪಾಧ್ಯಕ್ಷ ವೆಂಕಟೇಶಯ್ಯ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.