ಮೃತರ ಕುಟುಂಬಕ್ಕೆ ಪುನವರ್ಸತಿ, ಪರಿಹಾರ ಕಲ್ಪಿಸಿ: ಅಬ್ದುಲ್ ಮಜೀದ್
ಮೈಸೂರು: ಬಡ್ಡಿ ವ್ಯವಹಾರದ ಹಿನ್ನೆಲೆಯಲ್ಲಿ ದಾಳಿಗೊಳಗಾಗಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ಶಾಶ್ವತ ಪುನರ್ವಸತಿ ಕಲ್ಪಿಸಿಕೊಟ್ಟು, ಸೂಕ್ತ ಪರಿಹಾರ ಒದಗಿಸಬೇಕು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದರು.
ಕೆ.ಎನ್. ಪುರದಲ್ಲಿ ನಡೆದ ಘಟನೆಯಲ್ಲಿ ಗಾಯಾಳುಗಳ ಪೈಕಿ ಅಫ್ಜಲ್ ಪಾಷ, ಅವರ ಶೀರಿನ್ ತಾಜ್ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಐವರು ಮಕ್ಕಳು ಅನಾಥರಾಗಿದ್ದಾರೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತ ಕಡುಬಡುವರು ಆ ಪ್ರದೇಶದಲ್ಲಿ ವಾಸಿಸುತ್ತಿದ್ದು, ಸರ್ಕಾರ ಅವರಿಗೆ ಸರಿಯಾಗಿ ಸೌಲಭ್ಯ ಒದಗಿಸಿಲ್ಲ. ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವ ಇಲ್ಲಿನ ಜನ ಅಕ್ರಮ ಬಡ್ಡಿ ವ್ಯಾಪಾರಿಗಳಿಂದ 100 ಸಾಲ ಪಡೆದು, ಶೇ.20 ಬಡ್ಡಿ ಪ್ರತಿದಿನ ಕಟ್ಟುತ್ತಿದ್ದಾರೆ. ಅಂದರೆ 100 ಪಡೆದು 600 ಪಾವತಿಸುವ ಸ್ಥಿತಿ ಇದೆ. ಇದರಲ್ಲಿ ಪೊಲೀಸರು ಸಹ ಶಾಮೀಲಾಗಿದ್ದಾರೆ ಎಂದು ಅವರು ಆರೋಪಿಸಿದರು.
ಘಟನೆ ನಡೆದ ಬಳಿಕ ಸರ್ಕಾರ, ಜಿಲ್ಲಾಡಳಿತವು ಭೇಟಿ ನೀಡಿಲ್ಲ. ಯಾವುದೇ ರೀತಿ ಪ್ರತಿಕ್ರಿಯೆ, ಪರಿಹಾರ ಸಹ ಘೋಷಿಸಿಲ್ಲ. ಸರ್ಕಾರವು ಈ ರೀತಿ ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಗಾಯಾಳು ಮಕ್ಕಳಿಗೆ ಖಾಸಗಿ ಆಸ್ಪತ್ರೆ ದಾಖಲಿಸಿ ಉತ್ತಮ ಚಿಕಿತ್ಸೆ ಕೊಡಿಸಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಶಾಶ್ವತವಾಗಿ ಗಡಿಪಾರು ಮಾಡಬೇಕು. ಅಕ್ರಮ ಲೇವಾದೇವಿದಾರರನ್ನು ಮಟ್ಟ ಹಾಕಬೇಕು. ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

