ದೇಶ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ
ಹುಣಸೂರು: ಸಮಾಜದಲ್ಲಿ ದುಡಿಯುವ ಕೈಗೆ ಕೆಲಸ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ಅನಿವಾರ್ಯತೆ ಭಾರತದ ಪ್ರತಿಯೊಬ್ಬ ಮತದಾರನಿಗೂ ಇದೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾತ್ ಸಿಂಹ ಅಭಿಪ್ರಾಯಪಟ್ಟರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಮತಯಾಚಿಸಿ ನಂತರ ಉಯಿಯೊಂಡನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕಳೆದ 60 ವರ್ಷಗಳಿಂದ ಆಡಳಿತ ನಡೆಸಿದ ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆ ಏನು ಎಂಬುವ ಬಗ್ಗೆ ಪ್ರತಿಯೊಬ್ಬ ಮತದಾರನು ಅರಿತುಕೊಂಡು ಬದಲಾವಣೆ ಬಯಸಿದ್ದಾನೆ. ವಾಜಪೇಯಿ ಪ್ರಧಾನಮಂತ್ರಿ ಆಗಿದ್ದಾಗ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದು ಹೇಳಿದರು.
ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವಂತೆ ಮನವಿ ಮಾಡಿದರು. ನರೇಂದ್ರ ಮೋದಿ ಪ್ರಧಾನಮಂತ್ರಿಯಾದಲ್ಲಿ ದೇಶದ ನಾಲ್ಕು ಭಾಗದಲ್ಲೂ ಬುಲೆಟ್ ರೈಲ್, ರಸ್ತೆ ಅಭಿವೃದ್ಧಿ, ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಿದ್ದಾರೆ. ನಾನು ಸಹ ಮೈಸೂರು ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಲು ಪಣತೊಟ್ಟಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಕಳೆದ ಐದು ವರ್ಷದಿಂದ ಜನತೆಗೆ ಮುಖ ತೋರಿಸಲು ಸಾಧ್ಯವಾಗಿಲ್ಲ. ಚುನಾವಣೆ ಪ್ರಾರಂಭವಾದ ಬಳಿಕ ಕಾಂಗ್ರೆಸ್ ಏಜೆಂಟರು ಚುನಾವಣೆ ಹಿಂದಿನ ದಿನ ಮತದಾನವನ್ನು ಖರೀದಿ ಮಾಡುವ ಪ್ರಯತ್ನ ನಡೆಯುತ್ತಿದೆ. ಮತದಾರರು ಆಸೆ ಆಮಿಷಕ್ಕೆ ಒಳಗಾಗಿ ಭ್ರಷ್ಟರಿಗೆ ಮತದಾನ ಮಾಡಿದರೆ, ಏಪ್ರಿಲ್ ಒಂದರಂದು ಫೂಲ್ ಮಾಡುವ ಹಾಗೆ ಇಡೀ 5 ವರ್ಷವೂ ಪೂಲ್ ಮಾಡುತ್ತಾರೆ. ಅಭಿವೃದ್ಧಿ ಕುಂಠಿತವಾಗಿ ನರಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಚ್ಚರ ವಹಿಸಿ ಬಿಜೆಪಿ ಬೆಂಬಲಿಸುವಂತೆ ಕೋರಿದರು.
ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಕೊಡಗು ಜಿಪಂ ಅಧ್ಯಕ್ಷ ರಾಜರಾಂ ಮಾತನಾಡಿದರು. ತಾಲೂಕು ಬಿಜೆಪಿ ಅಧ್ಯಕ್ಷ ಹನಗೋಡು ಮಂಜುನಾಥ್, ಮುಖಂಡರಾದ ನಾಗರಾಜ್ ಮಲ್ಲಾಡಿ, ಯು.ಎಸ್. ಶೇಖರ್, ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್, ಚಿನ್ನರಾಜ್, ರಮೇಶ್ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

