ನೇಮಕ
ಮೈಸೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪರಿಷತ್ ಸದಸ್ಯರಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಪಿ.ಮಂಜು ನಾಥ್ ನೇಮಕವಾಗಿದ್ದಾರೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲೆಯಿಂದ ಇವರು ಆಯ್ಕೆಯಾಗಿದ್ದು, ಇದಕ್ಕೂ ಮೊದಲು ತೋಂಟದಾರ್ಯ ಹಾಗೂ ಸಿ.ಎಚ್. ವಿಜಯಶಂಕರ್ ಕಾರ್ಯನಿರ್ವಹಿಸಿದ್ದರು.
ವಿದ್ಯುತ್ ವ್ಯತ್ಯಯ
ಮೈಸೂರು: ಮಾರುತಿ ದೇವಸ್ಥಾನ ರಸ್ತೆಯ ವಿಸ್ತರಣೆ ಕಾರ್ಯಕ್ಕಾಗಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯುವುದರಿಂದ ಏ.5 ರಂದು ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಹೇಳಿದ್ದಾರೆ. ವಿದ್ಯುತ್ ನಿಲುಗಡೆಯಾಗುವ ಪ್ರದೇಶಗಳು- ಟಿ.ಕೆ. ಬಡಾವಣೆ, ಮಾರುತಿ ದೇವಸ್ಥಾನದ ರಸ್ತೆ, ಕಾಮಾಕ್ಷಿ ಆಸ್ಪತ್ರೆ ಹಿಂಭಾಗದ ಪ್ರದೇಶಗಳು, ವಿಶ್ವಮಾನವ ಜೋಡಿ ರಸ್ತೆ, ನ್ಯಾಯಾಧೀಶರ ವಸತಿ ಗೃಹಗಳು, ಕಾಮಾಕ್ಷಿ ಆಸ್ಪತ್ರೆ ಹಾಗೂ ಸುತ್ತಮುತ್ತಲ ಪ್ರದೇಶಗಳು.
ಎಚ್ಎಸ್ಸೆಸ್ ಅಸ್ವಸ್ಥ
ಮೈಸೂರು: ಮಾಜಿ ಶಾಸಕ ಎಚ್.ಎಸ್. ಶಂಕ ರಲಿಂಗೇಗೌಡ ತೀವ್ರ ಅಸ್ವಸ್ಥರಾ ಗಿದ್ದು, ಬಿಜಿಎಸ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಶಂಕರಲಿಂಗೇಗೌಡ ಅವರ ಆರೋಗ್ಯ ವಿಚಾರಿಸಿದ್ದಾರೆ.
ಕಾರ್ಮಿಕ ಸಾವು
ಮೈಸೂರು: ಮರಳು ತುಂಬಿದ ಲಾರಿ ಉರುಳಿ ಬಿದ್ದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಟಿ.ನರಸೀಪುರ ರಸ್ತೆಯಲ್ಲಿರುವ ಆಲನಹಳ್ಳಿ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಟಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ನಿವಾಸಿ ಮೂರ್ತಿ (40) ಮೃತಪಟ್ಟವರು. ಅದೇ ಗ್ರಾಮದ ಮಹೇಶ್ ಮತ್ತು ರಾಚಯ್ಯ ಎಂಬವರು ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಮರಳು ತುಂಬಿದ ಲಾರಿಯು ಟಿ.ನರಸೀಪುರದಿಂದ ಮೈಸೂರಿನತ್ತ ಬರುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಉರುಳಿ ಬಿದ್ದಿದೆ. ಈ ವೇಳೆ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

