ಡಿವಿಎಸ್, ಈಶ್ವರಪ್ಪ ಹೇಳಿಕೆಗೆ ಖಂಡನೆ
ಮೈಸೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರು ಒಕ್ಕಲಿಗರೆಲ್ಲ ಬಿಜೆಪಿ ಬೆಂಬಲಿಸಬೇಕೆಂದು ಕರೆ ನೀಡಿರುವುದು ಅಸಹನೀಯವಾದದ್ದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಒಂದು ಜಾತಿಯ ಮತಗಳಿಂದ ಅಭ್ಯರ್ಥಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಅವರು ಅರಿಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಕೋಟೆಹುಂಡಿ ಮಹದೇವು ಟೀಕಿಸಿದ್ದಾರೆ. ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ ರಾತ್ರೋರಾತ್ರಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ ಮನೆಗೆ ಹೋಗಿ ವರ್ಗಾವಣೆ, ಅಭಿವೃದ್ಧಿ, ಹಣಕಾಸು ವ್ಯವಹಾರ ನಡೆಸುತ್ತಿದ್ದು ಜನರಿಗೆ ಗೊತ್ತಿದೆ. ಒಕ್ಕಲಿಗ ಜನಾಂಗವನ್ನು ಓಲೈಸಿಕೊಂಡಿರುವ ಡಿವಿಎಸ್ ಇತರೆ ಜಾತಿಗಳ ಮತಗಳನ್ನು ಕೇಳುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ಜರಿದಿದ್ದಾರೆ. ಇನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರ ಆಸ್ತಿ ತನಿಖೆಯಾಗಲಿ ಎಂದಿದ್ದಾರೆ.
ಮತದಾನ ಜಾಗೃತಿ ಜಾಥಾ ನಾಳೆ
ಮೈಸೂರು: ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಏ.7 ರಂದು ನಗರದಲ್ಲಿ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 6ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಜಾಥಾ ಹೊರಡಲಿದ್ದು, ದೊಡ್ಡ ಗಡಿಯಾರ, ಅಶೋಕ ರಸ್ತೆ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಇರ್ವಿನ್ ರಸ್ತೆ, ಕೆ.ಆರ್. ಆಸ್ಪತ್ರೆ ವೃತ್ತ, ನ್ಯೂ ಸಯ್ಯಾಜಿರಾವ್ ರಸ್ತೆ, ಕೆ.ಆರ್. ವೃತ್ತ ಮುಖೇನ ಸ್ವಸ್ಥಾನಕ್ಕೆ ಮರಳಲಿದೆ. ಬಳಿಕ ಸಂಜೆ 7ಕ್ಕೆ ಕೆ.ಆರ್. ವೃತ್ತದಲ್ಲಿ ಪಂಜಿನ ಮೆರವಣಿಗೆ ಏರ್ಪಡಿಸಲಾಗಿದೆ. ಈ ಜಾಥಾದಲ್ಲಿ ಚುನಾವಣಾಧಿಕಾರಿ, ಪೊಲೀಸ್ ಅಧಿಕಾರಿಗಳು, ಮತದಾರರು, ಸ್ವೀಪ್ ಅಧಿಕಾರಿಗಳು, ಹಿರಿಯ ನಾಗರಿಕರು ಸೇರಿದಂತೆ ಹಲವಾರು ಮಂದಿ ಪಾಲ್ಗೊಳ್ಳುವರು ಎಂದು ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸುರೇಶ್ ತಿಳಿಸಿದ್ದಾರೆ. ದೂ.0821- 2564179 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

