ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಕೆ.ಆರ್. ನಗರ: ಗ್ರಾಮಾಂತರ ಪ್ರದೇಶದ ಮಕ್ಕಳು ಸದಾ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳ ಪ್ರದರ್ಶನಕ್ಕೆ ವೇದಿಕೆ ಸಿದ್ಧಪಡಿಸಿಕೊಳ್ಳಬೇಕು ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್ ಹೇಳಿದರು. ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಬಸವೇಶ್ವರ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರಿಕೆಟ್ ಆಟದ ಜತೆಗೆ ದೇಶಿ ಕ್ರೀಡೆಗಳಾದ ಖೋ ಖೋ, ಕಬಡ್ಡಿ ಸೇರಿದಂತೆ ಇತರೆ ಆಟಗಳ ಕಡೆಗೂ ಗಮನಹರಿಸಿ ಎಂದು ಕಿವಿಮಾತು ಹೇಳಿದರು. ಹೊಸಕೋಟೆ ಗ್ರಾಪಂ ಮಾಜಿ ಅಧ್ಯಕ್ಷ ಸಚಿನ್, ಯುವ ಮುಖಂಡ ಎಚ್.ಪಿ. ಶಿವಕುಮಾರ್, ಬಸವೇಶ್ವರ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಯೋಗೀಶ್, ಉಪಾಧ್ಯಕ್ಷ ರವೀಶ್, ಕಾರ್ಯದರ್ಶಿ ಮನು, ಖಜಾಂಚಿ ಸುನಿಲ್, ಪದಾಧಿಕಾರಿಗಳಾದ ನಾಗರಾಜು, ನಟರಾಜು, ಚೇತನ್, ಪ್ರತಾಪ್, ನವೀನ್, ರವೀಶ್ ಇದ್ದರು.
ಕೆ.ಆರ್. ನಗರದಲ್ಲಿ ಬಾಬೂಜಿ ಜಯಂತಿ
ಕೆ.ಆರ್. ನಗರ: ತಾಲೂಕು ಆಡಳಿದ ವತಿಯಿಂದ ಪಟ್ಟಣದ ಮಿನಿ ವಿಧಾನಸೌದದಲ್ಲಿ ಶನಿವಾರ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 107ನೇ ವರ್ಷದ ಜನ್ಮದಿನ ಆಚರಿಸಲಾಯಿತು. ಬಾಬೂಜಿ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ ಪುಷ್ಪಾರ್ಚನೆ ಮಾಡಿ ಮಾತನಾಡಿ, ದೇಶ ಆಹಾರದ ಸಮಸ್ಯೆ ಎದುರಿಸುತ್ತಿದ್ದ ವೇಳೆ ಹಸಿರು ಕ್ರಾಂತಿಯ ಮೂಲಕ ಆ ಸಮಸ್ಯೆಯನ್ನು ನೀಗಿಸಿ ಸ್ವಾಭಿಮಾನ ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಶ್ಲಾಘಿಸಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಸಿದ್ದಲಿಂಗಮೂರ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಟಿ. ಶಿವಪ್ರಸಾದ್, ಪುರಸಭಾ ಮುಖ್ಯಾಧಿಕಾರಿ ಚಿಕ್ಕನಂಜಯ್ಯ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಿ.ಮಹದೇವ್, ಉಪ ತಹಸೀಲ್ದಾರ್ ತಿಮ್ಮಯ್ಯ ಇದ್ದರು.
ಪುರಸಭಾ ಕಚೇರಿಯಲ್ಲಿ: ಪಟ್ಟಣದ ಪುರಸಭಾ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ್ ಅವರ 107 ನೇ ವರ್ಷದ ಜನ್ಮದಿನದ ಅಂಗವಾಗಿ ಪುರಸಭಾಧ್ಯಕ್ಷೆ ಪಾರ್ವತಿ ನಾಗರಾಜು, ಉಪಾಧ್ಯಕ್ಷೆ ಕವಿತಾ ವಿಜಯಕುಮಾರ್ ಕಚೇರಿಯ ಆವರಣದಲ್ಲಿರುವ ಬಾಬುಜೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

