ಮೈಸೂರು

ಶಂಕರಲಿಂಗೇಗೌಡರನ್ನು ಭೇಟಿಯಾದ ಪ್ರತಾಪ್

Published On :

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಶನಿವಾರ ತೀವ್ರ ಅಸ್ವಸ್ಥರಾಗಿರುವ ಮಾಜಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. ತಮ್ಮ ಬಿಡುವಿಲ್ಲದ ಪ್ರಚಾರದ ನಡುವೆ ಶನಿವಾರ ಮಧ್ಯಾಹ್ನ ರೇಲ್ವೆ ನಿಲ್ದಾಣ ಬಳಿಯ ಡಾ.ಬಾಬೂ ಜಗಜೀವನರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅಪೋಲೋ ಆಸ್ಪತ್ರೆ ತೆರಳಿದ ಪ್ರತಾಪ್ ಸಿಂಹ ಅವರು ಎಚ್.ಎಸ್. ಶಂಕರಲಿಂಗೇಗೌಡರ ಆರೋಗ್ಯ ವಿಚಾರಿಸಿದರು. ಬಳಿಕ ಅವರ ಕುಟುಂಬ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ಮುಖಂಡರಾದ ಮೈ.ವಿ. ರವಿಶಂಕರ್, ಯಶಸ್ವಿನಿ ಸೋಮಶೇಖರ್, ರಮೇಶ್, ಬಿ.ಪಿ. ಮಂಜುನಾಥ್ ಇದ್ದರು.


ಜೆಡಿಎಸ್ ಅಭ್ಯರ್ಥಿಗೆ ಎಐಐಸಿ ಬೆಂಬಲ


ಮೈಸೂರು: ಅಖಿಲ ಭಾರತ ಇಮಾಮ್ಸ್ ಪರಿಷತ್ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದೆ. ಶುಕ್ರವಾರ ನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಅಖಿಲ ಭಾರತ ಇಮಾಮ್ಸ್ ಪರಿಷತ್ ಪದಾಧಿಕಾರಿಗಳನ್ನು ಭೇಟಿ ಮಾಡಿ ಬೆಂಬಲ ನೀಡುವಂತೆ ಕೋರಿದರು. ನಂತರ ಶಿವಾಜಿ ರಸ್ತೆಯ ಅರಾಫತ್ ವೆಡ್ಡಿಂಗ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ದೇವೇಗೌಡ ಮಾತನಾಡಿ, ಈ ಬಾರಿ ತೃತೀಯ ರಂಗ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ದೇಶದ ಹಿತದೃಷ್ಟಿಯಿಂದ ತಮ್ಮನ್ನು ಬೆಂಬಲಿಸುವಂತೆ ತಿಳಿಸಿದರು. ಇದೇ ವೇಳೆ ಎಐಐಸಿ ಜಿಲ್ಲಾಧ್ಯಕ್ಷ ಸೈಯದ್ ಅಕ್ರಂ, ಪ್ರೊ.ಶಬ್ಬೀರ್ ಮುಸ್ತಫಾ, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಫಾರೂಖ್ ರೆಹಮಾನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.