ಮೈಸೂರು

ಸಿ.ಟಿ. ರವಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Published On :

ಮೈಸೂರು: ಭಯೋತ್ಪಾದಕ ಸಂಘಟನೆಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಪಡೆದಿದ್ದಾರೆ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಟಿ.ರವಿ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟಿಸಿದರು. ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟಿಸಿದ ಕಾರ್ಯಕರ್ತರು, ಚುನಾವಣಾ ಸಂದರ್ಭದಲ್ಲಿ ಇಲ್ಲಸಲ್ಲದ ಆರೋಪ ಮಾಡಿ ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿರುವ ಸಿ.ಟಿ. ರವಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಶಾಸಕ ಎಂ.ಕೆ.ಸೋಮಶೇಖರ್, ಪ್ರಾಮಾಣಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿ.ಟಿ. ರವಿ ಆಧಾರರಹಿತ ಆರೋಪ ಮಾಡಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ. ಸಮಾಜದಲ್ಲಿ ಶಾಂತಿ ಕದಡುತ್ತಿರುವ ಸಿ.ಟಿ. ರವಿ ಅವರನ್ನು ಜಿಲ್ಲಾ ದಂಡಾಧಿಕಾರಿ ಬಂಧಿಸಲೂ ಆದೇಶಿಸಬೇಕು ಎಂದು ಆಗ್ರಹಿಸಿದರು. ಮಾಜಿ ಮೇಯರ್ ಪುರುಷೋತ್ತಮ್, ಪಾಲಿಕೆ ಸದಸ್ಯ ಸುನಿಲ್, ಮುಖಂಡರಾದ ಜಿ. ಸೋಮಶೇಖರ್, ಸಿ.ಎಸ್. ರಘು, ರವಿ, ವಿಶ್ವ, ಕುರುಬಾರಹಳ್ಳಿ ರವಿ, ಬಸವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.