ಮೈಸೂರು

ಚುನಾವಣಾ ಸಿದ್ಧತೆ ಸುಸೂತ್ರ: ಜಿಲ್ಲಾಧಿಕಾರಿ

Published On :

ಪಿರಿಯಾಪಟ್ಟಣ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆ ಸುಸೂತ್ರವಾಗಿ ನಡೆದಿದೆ ಎಂದು ಜಿಲ್ಲಾಧಿಕಾರಿ ಡಿ. ಶಿಖಾ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಈವರೆಗೆ ಒಟ್ಟು 22 ಕ್ರಿಮಿನಲ್ ಮೊಕದ್ದಮೆಗಳು, 100ಕ್ಕೂ ಹೆಚ್ಚು ಅಬಕಾರಿ ಪ್ರಕರಣಗಳು ದಾಖಲಾಗಿವೆ. ಮೈಸೂರು ನಗರದಲ್ಲಿ 4500 ಸೀರೆಗಳು ಹಾಗೂ 2 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪಟ್ಟಣದ ಪುಷ್ಪ ಶಾಲೆಯಲ್ಲಿ ಚುನಾವಣಾ ಸಿಬ್ಬಂದಿಗೆ ತರಬೇತಿ ಮತ್ತಿತರ ಚುನಾವಣಾ ಚಟುವಟಿಕೆಗಳು ನಡೆಯಲಿದ್ದು ಬೇಕಾದ ಎಲ್ಲಾ ಸಿದ್ಧತೆಗಳನ್ನು ಹಾಗೂ ಭದ್ರತಾ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿವೆ ಎಂದು ತಿಳಿಸಿದರು. ಐಎಎಸ್ ಅಧಿಕಾರಿ ಅನ್ಸಿಸ್‌ಜಾಯ್, ಸಹಾಯಕ ಚುನಾವಣಾಧಿಕಾರಿ ಡಾ. ನಂಜುಂಡೇಗೌಡ, ತಹಸೀಲ್ದಾರ್ ಮೋಹನ್, ಸರ್ಕಲ್‌ಇನ್‌ಸ್ಪೆಕ್ಟರ್ ಪ್ರಸನ್ನಕುಮಾರ್ ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.