ದಲಿತರಿಗೆ ಕಾಂಗ್ರೆಸ್ ಅನಿವಾರ್ಯವಲ್ಲ: ಹಂಸರಾಜು
ಮೈಸೂರು: ಸ್ವಾತಂತ್ರ್ಯ ನಂತರದ ದಿನಗಳಲ್ಲಿ ದಲಿತ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುತ್ತಾ ಬಂದಿತ್ತು. ಆದರೆ, ದಲಿತ ಸಮುದಾಯಕ್ಕೆ ಕಾಂಗ್ರೆಸ್ ನೀಡಿರುವ ಕೊಡುಗೆ ಅತ್ಯಲ್ಪವಾಗಿದೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಹಂಸರಾಜು ಟೀಕಿಸಿದರು. ಈ ಮಾಹಿತಿ ಸತ್ಯ ಅರಿಯದ ಛಲವಾದಿ ನಾರಾಯಣಸ್ವಾಮಿ ಅವರು ಎಸ್ಸಿ, ಎಸ್ಟಿಗೆ ಕಾಂಗ್ರೆಸ್ ಅನಿವಾರ್ಯ ಎಂದಿರುವುದು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್ ದಲಿತರಿಂದ ದೂರವಾಗುತ್ತಿದೆ. ಅದಕ್ಕೆ ಉದಾಹರಣೆ ಎಂದರೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳು. ಈ ಪರಿಸ್ಥಿತಿಯನ್ನು ನೋಡಿದರೆ ದಲಿತರಿಗೆ ಕಾಂಗ್ರೆಸ್ ಅನಿವಾರ್ಯವಲ್ಲ. ಬದಲಾಗಿ ಕಾಂಗ್ರೆಸ್‌ಗೆ ದಲಿತರೆ ಅನಿವಾರ್ಯ ಎಂಬುದನ್ನು ನಾರಾಯಣಸ್ವಾಮಿ ಅರಿಯಬೇಕು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡುತ್ತಾರೆ ಎಂಬ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿಸಿದೆವು. ನಂತರ ಅದು ಮೋಸ ಮಾಡಿತು ಎಂದು ಹೇಳಿದರು. ಮುಖಂಡರಾದ ನಟರಾಜು, ಅಭಿ ನಾಗಭೂಷಣ್, ಯಶವಂತಕುಮಾರ್, ರಾಜು, ಎ. ನಾಗರಾಜು, ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

